ಕರಿಕಲ್ಲು ಗುಡ್ಡ ಶೂಟ್‌ಔಟ್ ಪ್ರಕರಣ: ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರು

ವರದಿ: ಕಾರ್ತಿಕ್ ಗೌಡ, ಹನೂರು ಚಾಮರಾಜನಗರ: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲು ಗುಡ್ಡದಲ್ಲಿ ಆಗಸ್ಟ್ 15ರಂದು ನಡೆದ ಶೂಟ್‌ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ರಕ್ಷಕ ಶಿವರಾಜ್ ಸಾಸಲವಾಡೆ ಹಾಗೂ ವಾಚರ್‌ಗಳಾದ ಶಿವಲಿಂಗ ನಾಯ್ಕ ಮತ್ತು ಗಿರೀಶ್ ಅವರಿಗೆ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹೊಳೆಮುರಿದಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮರಿಯಮಂಗಲ ಗ್ರಾಮದ ಅಂತೋಣಿಸ್ವಾಮಿ, ಲಾಸರ್…

Read More

ಹನೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಅಡುಗೆ ಅನಿಲದ ಕೊರತೆ: ಸಿಲಿಂಡರ್‌ಗಾಗಿ ದಿನವಿಡೀ ಕಾಯುವ ಸ್ಥಿತಿ

ಹನೂರು ತಾಲೂಕಿನ ಗ್ರಾಮೀಣ ಭಾಗದಲ್ಲಿ ಅಡುಗೆ ಅನಿಲದ ಕೊರತೆ: ಸಿಲಿಂಡರ್‌ಗಾಗಿ ದಿನವಿಡೀ ಕಾಯುವ ಸ್ಥಿತಿ ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರಬೆಟ್ಟದ ತಪ್ಪಲಿನ ಗ್ರಾಮೀಣ ಪ್ರದೇಶಗಳಲ್ಲಿ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಕೊರತೆ ಉಂಟಾಗಿದ್ದು, ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಒಂದೆಡೆ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿ ಜನರು ಸಂಕಷ್ಟದಲ್ಲಿದ್ದರೆ, ಮತ್ತೊಂದೆಡೆ ಕುಟುಂಬದ ಅಡುಗೆಗೆ ಅಗತ್ಯವಾದ ಸಿಲಿಂಡರ್‌ಗಳು ಸಮಯಕ್ಕೆ ಸರಿಯಾಗಿ ದೊರೆಯದೆ ಪರದಾಡುವಂತಾಗಿದೆ. ಅಡುಗೆ ಅನಿಲ ಸಿಲಿಂಡರ್‌ಗಾಗಿ…

Read More

ಬುದ್ಧನ ಶಾಂತಿ, ಸಮಾನತೆ ಹಾಗೂ ಮಾನವೀಯತೆಯ ಸಂದೇಶ ವಿಶ್ವಕ್ಕೆ ದಾರಿದೀಪ: ಶಾಸಕ ಎಂ.ಆರ್. ಮಂಜುನಾಥ್

ಬುದ್ಧನ ಶಾಂತಿ, ಸಮಾನತೆ ಹಾಗೂ ಮಾನವೀಯತೆಯ ಸಂದೇಶ ವಿಶ್ವಕ್ಕೆ ದಾರಿದೀಪ: ಶಾಸಕ ಎಂ.ಆರ್. ಮಂಜುನಾಥ್ ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ಗೌತಮ ಬುದ್ಧರು ಸಾರಿದ ಶಾಂತಿ, ಸಮಾನತೆ, ಕರುಣೆ ಹಾಗೂ ಮಾನವೀಯತೆಯ ಸಂದೇಶಗಳು ಇಡೀ ವಿಶ್ವಕ್ಕೆ ದಾರಿದೀಪವಾಗಿವೆ ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು. ಹನೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನದ ಅಂಗವಾಗಿ ಆಯೋಜಿಸಿದ್ದ ‘ದಮ್ಮ ಪಯಣ’ ಜಾಗೃತಿ ಜಾಥಾದ ರಥಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಪುಷ್ಪಾರ್ಚನೆ…

Read More

ಹನೂರು ಬಫರ್ ವಲಯದಲ್ಲಿ ಜಿಂಕೆ ಬೇಟೆ: ಎದೆಯ ಭಾಗ, ಎರಡು ಮುಂಗಾಲು ಕತ್ತರಿಸಿ ಪರಾರಿ; ಪ್ರಕರಣ ದಾಖಲು

ಹನೂರು ಬಫರ್ ವಲಯದಲ್ಲಿ ಜಿಂಕೆ ಬೇಟೆ: ಎದೆಯ ಭಾಗ, ಎರಡು ಮುಂಗಾಲು ಕತ್ತರಿಸಿ ಪರಾರಿ; ಪ್ರಕರಣ ದಾಖಲು ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ಕರಿಕಲ್ಲು ಗುಡ್ಡ ಶೂಟ್‌ಔಟ್ ಪ್ರಕರಣದ ಬೆನ್ನಲ್ಲೇ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಬೇಟೆಗಾರರ ಹಾವಳಿ ಮತ್ತೆ ಹೆಚ್ಚಾಗಿದೆ. ಹನೂರು ಬಫರ್ ವಲಯದಲ್ಲಿ ಗಂಡು ಜಿಂಕೆಯೊಂದನ್ನು ಗುಂಡು ಹಾರಿಸಿ ಕೊಂದು, ಅದರ ಎದೆಯ ಭಾಗ ಹಾಗೂ ಎರಡು ಮುಂಗಾಲುಗಳನ್ನು ಕತ್ತರಿಸಿಕೊಂಡು ಬೇಟೆಗಾರರು ಪರಾರಿಯಾಗಿರುವ ಘಟನೆ ನಡೆದಿದೆ. ಹನೂರು ವನ್ಯಜೀವಿ ಉಪವಿಭಾಗದ ಪಚ್ಚೆದೊಡ್ಡಿ ಶಾಖೆಯ ವ್ಯಾಪ್ತಿಯಲ್ಲಿ…

Read More

ಹನೂರು:ಉಡುತೊರೆಹಳ್ಳ ಜಲಾಶಯದ ಬಳಿ ಕಡವೆಯ ಮೂರು ತುಂಡು ಪತ್ತೆ; ಬೇಟೆಗಾರರು ಪರಾರಿ

ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ ನಡೆದ ಬೆಚ್ಚಿಬೀಳಿಸುವ ಘಟನೆ ಬೆನ್ನಲ್ಲೇ, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಅಮಾನವೀಯ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ. ಹನೂರು ವಲಯದ ಉಡುತೊರೆಹಳ್ಳ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ನೀರು ಕುಡಿಯಲು ಬಂದಿದ್ದ ಕಡವೆಯನ್ನು ದುಷ್ಕರ್ಮಿಗಳು ನಾಡಬಂದೂಕಿನಿಂದ ಗುಂಡು ಹಾರಿಸಿ ಬೇಟೆಯಾಡಿರುವ ಶಂಕೆ ವ್ಯಕ್ತವಾಗಿದೆ. ಬಳಿಕ ಕಡವೆಯ ದೇಹವನ್ನು ಮೂರು ತುಂಡುಗಳಾಗಿ ಕತ್ತರಿಸಿ, ಮಾಂಸವನ್ನು ಚೀಲದಲ್ಲಿ ತುಂಬಿಕೊಂಡು ಸಾಗಿಸುತ್ತಿದ್ದ ವೇಳೆ ಅರಣ್ಯ…

Read More

ಹನೂರು ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಮಾಣಿಕ ಹೋರಾಟ; ಬಿಜೆಪಿ ಮುಖಂಡ ನಿಶಾಂತ್

ಹನೂರು: ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇನೆ. ಶೂಟ್‌ಔಟ್ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವ ಅವಶ್ಯಕತೆ ನನಗಿಲ್ಲ ಎಂದು ಸಮಾಜ ಸೇವಕ ಹಾಗೂ ಬಿಜೆಪಿ ಮುಖಂಡ ನಿಶಾಂತ್ ಸ್ಪಷ್ಟಪಡಿಸಿದರು. ಹನೂರು ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೂಟ್‌ಔಟ್ ಪ್ರಕರಣವನ್ನು ವಿರೋಧಿಸಿ ಹನೂರು ಪಟ್ಟಣದಲ್ಲಿ ನಡೆದ ಬಂದ್‌ನಲ್ಲಿ ಕನ್ನಡಪರ ಸಂಘಟನೆಗಳು, ಕರ್ನಾಟಕ ರಾಜ್ಯ ರೈತ ಸಂಘ, ಡಿಎಸ್‌ಎಸ್, ಬಿಎಸ್‌ಪಿ, ಕೆಆರ್‌ಎಸ್, ಮಾನವ ಹಕ್ಕುಗಳ ಆಯೋಗ ಸೇರಿದಂತೆ ಹಲವು ಸಂಘಟನೆಗಳು ಭಾಗವಹಿಸಿದ್ದವು. ತಾವು ಪಕ್ಷದ ವತಿಯಿಂದ ಪ್ರತಿಭಟನೆಯಲ್ಲಿ…

Read More

ಹನೂರಿನಲ್ಲಿ ಕೆಎಸ್‌ಆರ್‌ಟಿಸಿ ನೂತನ ಬಸ್ ಘಟಕ ನಿರ್ಮಾಣಕ್ಕೆ ಸಚಿವ ಸಿ. ಪುಟ್ಟರಂಗಶೆಟ್ಟಿ ಶಂಕುಸ್ಥಾಪನೆ

ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ತಾಲೂಕು ಕೇಂದ್ರದಲ್ಲಿ ಕೆಎಸ್‌ಆರ್‌ಟಿಸಿಯ ನೂತನ ಬಸ್ ಘಟಕ ನಿರ್ಮಾಣ ಕಾರ್ಯಕ್ಕೆ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹನೂರು ಭಾಗದಲ್ಲಿ ಸುಸಜ್ಜಿತ ಬಸ್ ಘಟಕ ನಿರ್ಮಾಣವಾದ ನಂತರ ಗ್ರಾಮೀಣ ಹಾಗೂ ಕಾಡಂಚಿನ ಪ್ರದೇಶಗಳಿಗೆ ಹೆಚ್ಚುವರಿ ಬಸ್ ಸಂಚಾರ ಕಲ್ಪಿಸಲು ಸಾರಿಗೆ ನಿಗಮಕ್ಕೆ ಅನುಕೂಲವಾಗಲಿದೆ. ಇದರಿಂದ ಸ್ಥಳೀಯ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಸುಲಭವಾಗಿ ಪ್ರಯಾಣಿಸಲು ಸಾಧ್ಯವಾಗಲಿದೆ ಎಂದರು. ನೂತನ ಘಟಕದಲ್ಲಿ ವಾಹನ…

Read More

ಕುಡಿಯುವ ನೀರು, ಜಾನುವಾರುಗಳ ಮೇವು ಸಮಸ್ಯೆ ಪರಿಹಾರಕ್ಕೆ ತುರ್ತಾಗಿ ಕ್ರಮವಹಿಸಿ: ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳು ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದು ಬರ ಪರಿಸ್ಥಿತಿ ಹಾಗೂ ಅತಿವೃಷ್ಟಿ ನಿರ್ವಹಣೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ಹಾಗೂ ಪ್ರಕೃತಿ ವಿಕೋಪ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳ ಮೇವಿನ ಕೊರತೆ ಉಂಟಾಗದಂತೆ ಅಧಿಕಾರಿಗಳು…

Read More

ಹನೂರು:ಕರ್ನಾಟಕ ಬ್ಯಾಂಕ್‌ನಿಂದ ವಿದ್ಯಾರ್ಥಿಗಳಿಗೆ ಪರಿಕರ ವಿತರಣೆ: ಸಮಾಜಮುಖಿ ಕಾರ್ಯಕ್ಕೆ ಶ್ರೀಗಳ ಮೆಚ್ಚುಗೆ

ವರದಿ: ಕಾರ್ತಿಕ್ ಗೌಡ, ಹನೂರು ಹನೂರು: ಶ್ರೀ ಮಲೆಮಹದೇಶ್ವರಸ್ವಾಮಿ ಕೃಪಾ ವಿದ್ಯಾಸಂಸ್ಥೆಯ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಬ್ಯಾಂಕ್ ತನ್ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಧಿಯಡಿ ಅಗತ್ಯ ಪರಿಕರಗಳನ್ನು ವಿತರಿಸಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಸಮಾಜದ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಆಧಾರವಾಗಿದ್ದು, ವಿದ್ಯಾರ್ಥಿಗಳ ಕಲಿಕೆ ಹಾಗೂ ವಸತಿ ಸೌಲಭ್ಯಗಳನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ ನೀಡಿರುವ ಸಹಕಾರ ಶ್ಲಾಘನೀಯವಾಗಿದೆ ಎಂದು ಹೇಳಿದರು. ಕರ್ನಾಟಕ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ಕೆ….

Read More

ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರ ವಹಿಸಿ: ಅಧಿಕಾರಿ ಮುನಿರಾಜು

ಹನೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹನೂರು ತಾಲೂಕಿನಲ್ಲಿ 2026ರ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭಗೊಂಡಿದ್ದು, ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿ ಮುನಿರಾಜು ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 2,24,616 ಮತದಾರರಿದ್ದು, ಪರಿಷ್ಕರಣೆಯ ಪೂರ್ವ ಅರ್ಹತಾ ಅವಧಿಯನ್ನು 2026ರ ಜೂನ್ 30ರಿಂದ ಆಗಸ್ಟ್ 8ರವರೆಗೆ ನಿಗದಿಪಡಿಸಲಾಗಿದೆ. ಇದೇ ಅವಧಿಯಲ್ಲಿ ಗೃಹಗೃಹ ಸಮೀಕ್ಷೆ ಕಾರ್ಯವೂ ನಡೆಯಲಿದೆ….

Read More