​ಬಜೆಟ್‌ನಲ್ಲಿ ಹನೂರು ಕ್ಷೇತ್ರದ ರೈತರಿಗೆ ಸಿಹಿ ಸುದ್ದಿ ನಿರೀಕ್ಷೆ: ಮಾಜಿ ಶಾಸಕ ಆರ್. ನರೇಂದ್ರ ವಿಶ್ವಾಸ

​ಹನೂರು: ಮುಂಬರುವ ರಾಜ್ಯ ಬಜೆಟ್‌ನಲ್ಲಿ ಹನೂರು ಕ್ಷೇತ್ರದ ರೈತಾಪಿ ವರ್ಗ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಸರ್ಕಾರವು ಮಹತ್ವದ ಕೊಡುಗೆಗಳನ್ನು ನೀಡಲಿದ್ದು, ಕ್ಷೇತ್ರದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ ಎಂದು ಮಾಜಿ ಶಾಸಕ ಆರ್. ನರೇಂದ್ರ ತಿಳಿಸಿದರು. ​ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜ್ವಲಂತ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವಲ್ಲಿ ತಾವು ಯಶಸ್ವಿಯಾಗಿದ್ದು, ಈ ಬಾರಿಯ ಆಯವ್ಯಯದಲ್ಲಿ ಪೂರಕ ಸ್ಪಂದನೆ ಸಿಗುವ ನಿರೀಕ್ಷೆಯಿದೆ ಎಂದರು. ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು…

Read More

ಮಲೆ ಮಹದೇಶ್ವರ ಬೆಟ್ಟದ ಪಾದಯಾತ್ರಿಗಳಿಗೆ ಪ್ರಸಾದ ವಿನಿಯೋಗ: ರಾಮನಗರ ಸಿಲ್ಕ್ ಸಿಟಿ ವತಿಯಿಂದ ಅನ್ನದಾಸೋಹ

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುವ ಸಾವಿರಾರು ಭಕ್ತಾದಿಗಳ ಸೇವೆಗಾಗಿ ರಾಮನಗರದ ಸಿಲ್ಕ್ ಸಿಟಿ ವತಿಯಿಂದ ಹನೂರು ತಾಲೂಕಿನ ಮಲ್ಲಯ್ಯನಪುರ ಗ್ರಾಮದ ಬಳಿ ಹಮ್ಮಿಕೊಂಡಿರುವ ಪ್ರಸಾದ ವಿನಿಯೋಗ ಹಾಗೂ ಅನ್ನದಾಸೋಹ ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ಜರುಗುತ್ತಿದೆ ಎಂದು ಸಿಲ್ಕ್ ಸಿಟಿ ಅಧ್ಯಕ್ಷರಾದ ಪ್ರಕಾಶ್ ವಿ. ತಿಳಿಸಿದ್ದಾರೆ. ಫೆಬ್ರವರಿ 10ರಿಂದ ಆರಂಭವಾಗಿರುವ ಈ ಸೇವಾ ಕಾರ್ಯಕ್ರಮವು ಫೆಬ್ರವರಿ 13ರವರೆಗೆ ಸತತ ನಾಲ್ಕು ದಿನಗಳ ಕಾಲ ನಿರಂತರವಾಗಿ ನಡೆಯಲಿದ್ದು, ಪಾದಯಾತ್ರಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ​ಮಲ್ಲಯ್ಯನಪುರ ಗ್ರಾಮದ…

Read More

ಶಾಲಾ ಮಕ್ಕಳ ಬಾಯಾರಿಕೆ ನೀಗಿಸದ ಅಧಿಕಾರಿಗಳ ನಡೆಗೆ ಆಕ್ರೋಶ: ಎಮ್.ಎಸ್.ದೊಡ್ಡಿಯಲ್ಲಿ ನೀರಿನ ಹಾಹಾಕಾರ, ಪ್ರತಿಭಟನೆಯ ಎಚ್ಚರಿಕೆ

ಹನೂರು:ತಾಲೂಕಿನ ಶೆಟ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಮ್.ಎಸ್.ದೊಡ್ಡಿ ಗ್ರಾಮದಲ್ಲಿ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಲ್ಲಿ ಸ್ಥಳೀಯ ಆಡಳಿತ ಸಂಪೂರ್ಣ ವಿಫಲವಾಗಿದ್ದು, ಅಧಿಕಾರಿಗಳ ಈ ನಿರ್ಲಕ್ಷ್ಯ ಧೋರಣೆಯನ್ನು ಗ್ರಾಮದ ಮುಖಂಡ ಎಮ್.ಎಸ್.ಶಿವಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಶಿಕ್ಷಣದ ಜೊತೆಗೆ ಕನಿಷ್ಠ ಕುಡಿಯುವ ನೀರನ್ನು ನೀಡಲಾಗದ ಇಂತಹ ದುಸ್ಥಿತಿಯಲ್ಲಿ ನಾವಿದ್ದೇವೆ ಎಂಬುದು ವಿಷಾದನೀಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಗ್ರಾಮದಲ್ಲಿ ನೀರಿನ ಅಭಾವ ತಾರಕಕ್ಕೇರಿದ್ದು, ಶಾಲಾ ಮಕ್ಕಳು ಹನಿ ನೀರಿಗೂ ಪರದಾಡುವಂತಾಗಿದೆ. ಈ ಕುರಿತು…

Read More

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ಆರ್. ಸಿದ್ದರಾಜು ನೇಮಕ

​ಹನೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಹನೂರು ವಿಧಾನಸಭಾ ಕ್ಷೇತ್ರದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಹಿರಿಯ ಮುಖಂಡ ಆರ್. ಸಿದ್ದರಾಜು ಅವರನ್ನು ನೇಮಕ ಮಾಡಲಾಗಿದೆ. ​ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರು ಹಾಗೂ ಜಿಲ್ಲಾ ಉಸ್ತುವಾರಿಗಳಾದ ಡಾ. ಎಸ್. ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ನೇಮಕಾತಿ ಸಭೆಯಲ್ಲಿ ಸಿದ್ದರಾಜು ಅವರಿಗೆ ಅಧಿಕೃತವಾಗಿ ನೇಮಕಾತಿ ಆದೇಶ ಪತ್ರವನ್ನು ಹಸ್ತಾಂತರಿಸಲಾಯಿತು. ​ಪಕ್ಷದ ಸಂಘಟನೆಗೆ ಆದ್ಯತೆ: ನೇಮಕಾತಿ ಬಳಿಕ ಮಾತನಾಡಿದ ಆರ್. ಸಿದ್ದರಾಜು ಅವರು, “ಮಾಜಿ ಶಾಸಕ…

Read More

​ಬಾಣಂತಿ ಕೊಲೆ ಪ್ರಕರಣ: ಆರೋಪಿ ಅಮಲ್‌ರಾಜ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೊಳ್ಳೇಗಾಲ ನ್ಯಾಯಾಲಯ

ಹನೂರು: ಕ್ಷುಲ್ಲಕ ಕಾರಣಕ್ಕೆ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ ಆರೋಪಿಗೆ ಕೊಳ್ಳೇಗಾಲದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಮಂಗಳವಾರ ಆದೇಶ ಹೊರಡಿಸಿದೆ. ​ಪ್ರಕರಣದ ಹಿನ್ನೆಲೆ: ಡಿಸೆಂಬರ್ 23, 2024ರಂದು ಸಂಜೆ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಆರೋಪಿ ಅಮಲ್‌ರಾಜ್ ಬಿನ್ ಥೋಮಸ್ ಎಂಬಾತ ಶೋಭಾ ಎಂಬ ಮಹಿಳೆಯ ಬಳಿ ಮದ್ಯಪಾನಕ್ಕಾಗಿ ಹಣ ಕೇಳಿದ್ದನು. ಹಣ ನೀಡಲು…

Read More

​ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಶಿವಕುಮಾರ್ ಎಮ್.ಎಸ್. ದೊಡ್ಡಿ ನೇಮಕ

ಹನೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಚಾಮರಾಜನಗರ ಜಿಲ್ಲಾ ಸಂಯೋಜಕರನ್ನಾಗಿ ಶಿವಕುಮಾರ್ ಎಮ್.ಎಸ್. ದೊಡ್ಡಿ ಅವರನ್ನು ನೇಮಕ ಮಾಡಲಾಗಿದೆ. ​ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರು ಹಾಗೂ ಜಿಲ್ಲಾ ಉಸ್ತುವಾರಿಯಾದ ಡಾ. ಎಸ್. ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಮಧುಸೂದನ್‌ ಅವರು ಶಿವಕುಮಾರ್ ಅವರಿಗೆ ಅಧಿಕೃತ ನೇಮಕಾತಿ ಆದೇಶ ಪತ್ರವನ್ನು ನೀಡಿ ಅಭಿನಂದಿಸಿದರು. ​ನೇಮಕಾತಿ ಆದೇಶ ಸ್ವೀಕರಿಸಿ ಮಾತನಾಡಿದ ಶಿವಕುಮಾರ್ ಎಮ್.ಎಸ್. ದೊಡ್ಡಿ, “ಮಾಜಿ…

Read More

​ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ: ಚಿರತೆ ದಾಳಿಗೆ ಮಂಡ್ಯ ಮೂಲದ ಯುವಕ ಬಲಿ

​ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತರೊಬ್ಬರ ಮೇಲೆ ಚಿರತೆ ದಾಳಿ ನಡೆಸಿ ಕೊಂದಿರುವ ದಾರುಣ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಭಕ್ತಾದಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಮೃತರನ್ನು ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ. ​ಮೃತ ಪ್ರವೀಣ್ ಅವರು ಮಂಡ್ಯದ ಚಿರನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮದ ನೂರಾರು ಸ್ನೇಹಿತರೊಂದಿಗೆ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದರು. ಮಂಗಳವಾರ ರಾತ್ರಿ ಬೆಟ್ಟದ ತಪ್ಪಲಿನ ತಾಳುಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದ…

Read More

ಶಿಕ್ಷಣದಿಂದ ಸಮಾಜದ ಪ್ರಗತಿ ಸಾಧ್ಯ: ಶಾಸಕ ಎಂ.ಆರ್. ಮಂಜುನಾಥ್; 3.82 ಕೋಟಿ ವೆಚ್ಚದ ನೂತನ ವಸತಿ ಶಾಲೆ ಲೋಕಾರ್ಪಣೆ

ಹನೂರು: ಶಿಕ್ಷಣದಿಂದ ಮಾತ್ರ ಪ್ರತಿಯೊಂದು ಸಮಾಜವೂ ಪ್ರಗತಿ ಹೊಂದಲು ಸಾಧ್ಯ ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ಅಭಿಪ್ರಾಯಪಟ್ಟರು. ತಾಲೂಕು ವ್ಯಾಪ್ತಿಯ ಕಾಡಂಚಿನ ಗ್ರಾಮವಾದ ಗಾಣಮಂಗಲದಲ್ಲಿ ಸುಮಾರು 3.82 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಆದಿವಾಸಿ ಮತ್ತು ಬುಡಕಟ್ಟು ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಬೇಕು ಎಂಬ ಸದುದ್ದೇಶದಿಂದ ಸರ್ಕಾರ ವಸತಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ಹಿಂದೆ…

Read More

ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಸಿಪಿಐ ಚಿಕ್ಕರಾಜ್ ಶೆಟ್ಟಿ,ರಾಮಪುರದಲ್ಲಿ ಅದ್ದೂರಿ ವಾಲಿಬಾಲ್ ಪಂದ್ಯಾವಳಿ: ವಿಜೇತರಿಗೆ ಬಹುಮಾನ ವಿತರಣೆ

ಹನೂರು: ಯುವಕರು ದುಶ್ಚಟಗಳು ಹಾಗೂ ಮಾದಕ ದ್ರವ್ಯ ಸೇವನೆಯಿಂದ ದೂರವಿದ್ದು, ಕ್ರೀಡೆಗಳತ್ತ ಗಮನ ಹರಿಸಿದರೆ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ರಾಮಪುರ ವೃತ್ತ ನಿರೀಕ್ಷಕ ಚಿಕ್ಕರಾಜ್ ಶೆಟ್ಟಿ ಕಿವಿಮಾತು ಹೇಳಿದರು. ​ತಾಲೂಕಿನ ರಾಮಪುರ ಗ್ರಾಮದ ಇಂದಿರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶ್ರೀ ಬೈಯ್ಯಮ್ಮ ತಾಯಿ ಹಾಗೂ ಆಂಜನೇಯ ಸ್ವಾಮಿ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಪ್ರಥಮ ವರ್ಷದ ವಾಲಿಬಾಲ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು….

Read More

ಬಸ್-ಬೈಕ್ ಮುಖಾಮುಖಿ ಡಿಕ್ಕಿ: ಮೃತರ ಕುಟುಂಬಕ್ಕೆ ಮಾಜಿ ಶಾಸಕ ಆರ್. ನರೇಂದ್ರ ಸಾಂತ್ವನ, ಪರಿಹಾರ ವಿತರಣೆ

ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಮಂಗಳವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕರ ಕುಟುಂಬಸ್ಥರನ್ನು ಮಾಜಿ ಶಾಸಕ ಆರ್. ನರೇಂದ್ರ ಅವರು ಭೇಟಿಯಾಗಿ ಸಾಂತ್ವನ ಹೇಳಿದರು. ಹನೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಶವಗಾರದ ಆವರಣದಲ್ಲಿ ಮೃತರ ಕುಟುಂಬಕ್ಕೆ ಸಾರಿಗೆ ನಿಗಮದ ವತಿಯಿಂದ ನೀಡಲಾದ ಮೊದಲ ಹಂತದ ಪರಿಹಾರದ ಮೊತ್ತವಾದ ಇಪ್ಪತೈದು ಸಾವಿರ ರೂಪಾಯಿಗಳನ್ನು ಇದೇ ವೇಳೆ ಹಸ್ತಾಂತರಿಸಿದರು. ​ಬಳಿಕ ಮಾತನಾಡಿದ ಅವರು, ಸಾರಿಗೆ ನಿಗಮದ ಅಧಿಕಾರಿಗಳ ಮೂಲಕ ಮೃತರ ಕುಟುಂಬಕ್ಕೆ ತಕ್ಷಣದ ನೆರವು…

Read More