ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರ ವಹಿಸಿ: ಅಧಿಕಾರಿ ಮುನಿರಾಜು
ಹನೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹನೂರು ತಾಲೂಕಿನಲ್ಲಿ 2026ರ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭಗೊಂಡಿದ್ದು, ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿ ಮುನಿರಾಜು ತಿಳಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಒಟ್ಟು 2,24,616 ಮತದಾರರಿದ್ದು, ಪರಿಷ್ಕರಣೆಯ ಪೂರ್ವ ಅರ್ಹತಾ ಅವಧಿಯನ್ನು 2026ರ ಜೂನ್ 30ರಿಂದ ಆಗಸ್ಟ್ 8ರವರೆಗೆ ನಿಗದಿಪಡಿಸಲಾಗಿದೆ. ಇದೇ ಅವಧಿಯಲ್ಲಿ ಗೃಹಗೃಹ ಸಮೀಕ್ಷೆ ಕಾರ್ಯವೂ ನಡೆಯಲಿದೆ….

