ದಂಟಳ್ಳಿ ಏತ ನೀರಾವರಿ ಯೋಜನೆ: 153 ದಿನಗಳ ರೈತರ ಅಹೋರಾತ್ರಿ ಧರಣಿ ಅಂತ್ಯ
ಹನೂರು: ತಾಲ್ಲೂಕಿನ ವಡಕೆಹಳ್ಳ ಗ್ರಾಮದಲ್ಲಿ ದಂಟಳ್ಳಿ ಏತ ನೀರಾವರಿ ಯೋಜನೆ ಜಾರಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯ ವತಿಯಿಂದ ಕಳೆದ 153 ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವು ಶನಿವಾರ ಅಧಿಕೃತವಾಗಿ ಮುಕ್ತಾಯಗೊಂಡಿತು. ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂ.ಆರ್. ಮಂಜುನಾಥ್ ಅವರು ಪ್ರತಿಭಟನಾ ನಿರತ ರೈತರ ಮನವೊಲಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಹೋರಾಟಕ್ಕೆ ಅಂತ್ಯ ಹಾಡಲಾಯಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಎಂ.ಆರ್. ಮಂಜುನಾಥ್, ಹನೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ರಸ್ತೆ,…

