ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಹನೂರು: ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು ವಿದ್ಯಾವಾರಾಧಿ (ಪಿಹೆಚ್.ಡಿ) ಪದವಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಮಂಗಳವಾರ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ 12 ಮತ್ತು 13ನೇ ಘಟಿಕೋತ್ಸವ ಸಮಾರಂಭದಲ್ಲಿ ಸ್ವಾಮೀಜಿಯವರಿಗೆ ಈ ಉನ್ನತ ಪದವಿಯನ್ನು ಪ್ರದಾನ ಮಾಡಲಾಯಿತು. ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆದ ಸನ್ಮಾನ್ಯ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪೂಜ್ಯ ಶ್ರೀಗಳಿಗೆ ಅಧಿಕೃತವಾಗಿ ಪದವಿ ಪ್ರಮಾಣಪತ್ರವನ್ನು ಹಸ್ತಾಂತರಿಸಿ ಗೌರವಿಸಿದರು. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರು ಕರ್ನಾಟಕ…
