ಚಳ್ಳಕೆರೆ ಬಳಿ ಭೀಕರ ರಸ್ತೆ ಅಪಘಾತ: ಮೂವರು ಆರ್‌ಎಸ್‌ಐ ಸಾವು; ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ

​ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು (RSI) ಸಾವನ್ನಪ್ಪಿರುವ ಘಟನೆ ತೀವ್ರ ವಿಷಾದ ಮೂಡಿಸಿದೆ. ಘಟನಾ ಸ್ಥಳಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ​ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ (CAR) ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್ ದಾರಿಮನಿ, ಅಮರೀಶ್ ಬರ್ಗಿ ಹಾಗೂ ಸಚೀನ್ ಮೃತಪಟ್ಟ ದುರ್ದೈವಿಗಳು….

Read More

ಚಿರ್ತದುರ್ಗ: ಹಿರಿಯೂರು ಬಸ್ ದುರಂತ: ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂ. ಪರಿಹಾರ ಘೋಷಣೆ; ತನಿಖೆಗೆ ಆದೇಶ

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಜವರಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಖಾಸಗಿ ಬಸ್ ಅಪಘಾತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ​ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಹಾಗೂ ತೀವ್ರವಾಗಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಚಿಕಿತ್ಸಾ ಪರಿಹಾರ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ. “ಘಟನೆಯ ಬಗ್ಗೆ ಅಧಿಕಾರಿಗಳಿಂದ…

Read More

​ಚಿತ್ರದುರ್ಗ ಬಸ್ ದುರಂತಕ್ಕೆ ಪ್ರಧಾನಿ ಮೋದಿ ತೀವ್ರ ಸಂತಾಪ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವರಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಖಾಸಗಿ ಬಸ್ ಅಪಘಾತದ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ 12ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ತಿಳಿಸಿರುವ ಅವರು, ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ. ​ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (PMNRF) ಯಿಂದ ಮೃತರ ಪ್ರತಿಯೊಬ್ಬರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ತಾತ್ಕಾಲಿಕ…

Read More

​ಚಿರ್ತದುರ್ಗ: ಹಿರಿಯೂರು ಸಮೀಪ ಭೀಕರ ರಸ್ತೆ ದುರಂತ: ಲಾರಿ-ಬಸ್ ಮುಖಾಮುಖಿ ಡಿಕ್ಕಿ, ಬೆಂಕಿಗೆ ಆಹುತಿಯಾದ 12 ಪ್ರಯಾಣಿಕರು

ಹಿರಿಯೂರು ಸಮೀಪ ಭೀಕರ ರಸ್ತೆ ದುರಂತ: ಲಾರಿ-ಬಸ್ ಮುಖಾಮುಖಿ ಡಿಕ್ಕಿ, ಬೆಂಕಿಗೆ ಆಹುತಿಯಾದ 12 ಪ್ರಯಾಣಿಕರು ​ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 48ರ ಹಿರಿಯೂರು ತಾಲ್ಲೂಕಿನ ಜವರಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಸಂಪೂರ್ಣ ಹೊತ್ತಿ ಉರಿದಿದ್ದು, ಕನಿಷ್ಠ 12 ಮಂದಿ ಸಜೀವ ದಹನಗೊಂಡಿದ್ದಾರೆ. ಅಪಘಾತದಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ​ಘಟನೆಯ ವಿವರ: ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ಗೆ, ಹಿರಿಯೂರಿನಿಂದ…

Read More