‘ಟೀಮ್ ಕರ್ನಾಟಕ’ವಾಗಿ ಜನರ ಸೇವೆ; ಪ್ರತಿ ವಿಧಾನಸಭೆಯಲ್ಲಿ ಜನತಾ ದರ್ಬಾರ್, ಬರ ನಿರ್ವಹಣೆಗೆ ಆದ್ಯತೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಚಿತ್ರದುರ್ಗ: ಸರ್ಕಾರ ಹಾಗೂ ಆಡಳಿತ ವ್ಯವಸ್ಥೆಗೆ ಹೊಸ ರೂಪ ನೀಡುವ ಉದ್ದೇಶದಿಂದ ಎಲ್ಲರೂ ‘ಟೀಮ್ ಕರ್ನಾಟಕ’ ಮನೋಭಾವದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಚಿತ್ರದುರ್ಗದಲ್ಲಿ ನಡೆದ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜನರ ಮಧ್ಯೆ ಸರ್ಕಾರ ಇರುವಂತೆ ನೋಡಿಕೊಳ್ಳಲು ‘ಪ್ರಜಾಸೇವಾ ಇಲಾಖೆ’ ಸ್ಥಾಪಿಸಲಾಗುತ್ತಿದ್ದು, ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನರ…

