ಕಾಲೇಜು ಹಾಸ್ಟೆಲ್‌ನಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿ ದಾರುಣ ಸಾವು; ಕುಟುಂಬಸ್ಥರಿಂದ ಅನುಮಾನ, ತನಿಖೆಗೆ ಆಗ್ರಹ
ದಾವಣಗೆರೆ: ನೋಡಲು ಅಚ್ಚುಕಟ್ಟಾಗಿ, ಮುದ್ದು ಮುಖದ, ಓದಿನಲ್ಲೂ ಸದಾ ಮುಂದಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಹಾಸ್ಟೆಲ್‌ನಲ್ಲಿ ದಾರುಣವಾಗಿ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದ್ವಿತೀಯ ಪಿಯುಸಿಗೆ ಪ್ರವೇಶ ಪಡೆದು, ಭವಿಷ್ಯದ ಬಗ್ಗೆ ಹತ್ತಾರು ಕನಸುಗಳನ್ನು ಹೊತ್ತುಕೊಂಡಿದ್ದ ಮಗಳ ಸಾವಿನಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕುರವತ್ತಿ ಗ್ರಾಮದ ನಿಂಗಪ್ಪ ಅವರ ಪುತ್ರಿ ರಂಜಿತಾ ಮೃತ ವಿದ್ಯಾರ್ಥಿನಿ. ದಾವಣಗೆರೆಯ ಪ್ರತಿಷ್ಠಿತ ಟೀಮ್ ಅಕಾಡೆಮಿಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ರಂಜಿತಾ, ನಾಲ್ಕೈದು ದಿನಗಳ ಹಿಂದಷ್ಟೇ…

