ಯಲ್ಲಾಪುರ ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ: ಧಾರವಾಡ ಮೂಲದ 6 ಮಂದಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಾಟ್‌ನ ಬಳಗಾರ್ ಸಮೀಪ ಇಂದು ಮುಂಜಾನೆ ಲಾರಿ ಹಾಗೂ ತೂಫಾನ್ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಧಾರವಾಡ ಮೂಲದ ಆರು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಬಸವರಾಜ್ (48), ಅಭಿಷೇಕ್ ಈಶ್ವರ್ (28), ಅಕ್ಷಯ (26), ಅಭಿಷೇಕ್ (26), ಸಂಜೀವ್/ಸಂಜಯ ಅಂಗಡಿ ಸೇರಿದಂತೆ ಒಟ್ಟು ಆರು ಮಂದಿ ಎಂದು ಗುರುತಿಸಲಾಗಿದೆ. ಇವರಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವರು…

