ಗುಡೇನಕಟ್ಟಿಯಲ್ಲಿ ಬೆಂಕಿ ಅವಘಡ: ಸಂತ್ರಸ್ತ ಕುಟುಂಬಗಳಿಗೆ ಷಣ್ಮುಖ ಶಿವಳ್ಳಿ ವೈಯಕ್ತಿಕ ನೆರವು

ಕುಂದಗೋಳ: ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಹೊಟ್ಟಿನ ಬಣವೆಗಳು ಹಾಗೂ ದನಕರುಗಳಿಗೆ ಉಪಯೋಗಿಸುವ ದವಸ-ಧಾನ್ಯಗಳು ಸುತ್ತು ಕರಕಲಾಗಿ ನಷ್ಟ ಅನುಭವಿಸಿದ ಕುಟುಂಬಗಳಿಗೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ ಅವರು ಬೆಂಕಿ ಅವಘಡದಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಬಳಿಕ ನೊಂದ ಕುಟುಂಬಗಳಿಗೆ ತಲಾ 5,000 ರೂ.ಗಳಂತೆ ತಮ್ಮ ವೈಯಕ್ತಿಕ ಹಣದಿಂದ…

Read Full News

ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ: ರೈತರಿಗೆ ಸರ್ಕಾರದ ಯೋಜನೆಗಳ ಮಾಹಿತಿ ತಲುಪಿಸಿ, ಅಂಗನವಾಡಿ ಹಾಗೂ ರಸಗೊಬ್ಬರ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಿ – ಸಚಿವ ಸಂತೋಷ ಲಾಡ್

ಧಾರವಾಡ: ರೈತರಿಗೆ ಸರ್ಕಾರದ ಯೋಜನೆಗಳ ಕುರಿತು ಸಮರ್ಪಕ ಮಾಹಿತಿ ಒದಗಿಸಲು ಅಧಿಕಾರಿಗಳು ಕ್ರಮವಹಿಸಬೇಕು. ಅಂಗನವಾಡಿ ಕೇಂದ್ರಗಳು ಹಾಗೂ ರಸಗೊಬ್ಬರ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸಂಪುಟ ದರ್ಜೆ ಸಚಿವ ಸಂತೋಷ ಲಾಡ್ ಸೂಚಿಸಿದರು. ಕಲಘಟಗಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಸಹಯೋಗದಲ್ಲಿ ನಡೆದ ಬರ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈತರಿಗೆ ಬಿತ್ತನೆ ಬೀಜ ಹಾಗೂ…

Read Full News