ಬೆಳಗಾವಿ: ಖ್ಯಾತ ವಕೀಲೆ ಪೂಜಾ ಕಾಕತಕರ್ ನಿವಾಸದ ಮೇಲೆ ಗುಂಡಿನ ದಾಳಿ; ಪುತ್ರಿ ಪ್ರಾಣಾಪಾಯದಿಂದ ಪಾರು
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸವಾಲು ಹಾಕುವಂತಹ ಆಘಾತಕಾರಿ ಘಟನೆಯೊಂದು ನಡೆದಿದ್ದು, ನಗರದ ಮಂಡೋಳಿ ರಸ್ತೆಯಲ್ಲಿರುವ ಖ್ಯಾತ ವಕೀಲೆ ಪೂಜಾ ಕಾಕತಕರ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ಮಧ್ಯರಾತ್ರಿ ಸುಮಾರು 1 ರಿಂದ 2 ಗಂಟೆಯ ಅವಧಿಯಲ್ಲಿ ಈ ಕೃತ್ಯ ನಡೆದಿದ್ದು, ಇಡೀ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ದುಷ್ಕರ್ಮಿಗಳು ಪೂಜಾ ಅವರ ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿಕೊಂಡು ಫೈರಿಂಗ್ ನಡೆಸಿದ್ದಾರೆ. ಆ ಸಮಯದಲ್ಲಿ ಮೊದಲ ಮಹಡಿಯ ಕೊಠಡಿಯಲ್ಲಿ ಪೂಜಾ…

