ಸುವರ್ಣಸೌಧದ ಮೇಲೆ ವಿಶ್ವದ 2ನೇ ಅತಿದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ: ಮುಖ್ಯಮಂತ್ರಿಗಳಿಂದ ದೇಶಪ್ರೇಮದ ಕರೆ
ಬೆಳಗಾವಿ: ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಮಂಗಳವಾರದಂದು (ಡಿ.09) ಜಗತ್ತಿನ ಎರಡನೇ ಅತಿದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಧ್ವಜವನ್ನು ನೀಡಿ ಕೊಡುಗೆ ನೀಡಿದ ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರ ಕುಟುಂಬಸ್ಥರಿಗೆ ಮತ್ತು ಈ ಕಾರ್ಯಕ್ರಮಕ್ಕೆ ಕಾರಣರಾದ ವಿಧಾನಸಭಾ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳನ್ನು ಸಲ್ಲಿಸಿದರು. ತ್ರಿವರ್ಣ ಧ್ವಜದ ಮಹತ್ವ ತ್ರಿವರ್ಣ ಧ್ವಜವು ಕೇವಲ…

