ಶೀಘ್ರದಲ್ಲೇ 1,600 ಪಿಎಸ್‌ಐ ಹುದ್ದೆಗಳ ನೇಮಕಾತಿ: ಗೃಹ ಸಚಿವ ಜಿ. ಪರಮೇಶ್ವರ್ ಭರವಸೆ
ಬೆಳಗಾವಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1,600 ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಇಲಾಖೆಯ ಬಲವರ್ಧನೆಗೆ ಸರ್ಕಾರ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಹಿಂದೆ 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಉಂಟಾಗಿದ್ದ ಅಕ್ರಮ…

