ಅಕ್ರಮ ಸಂಬಂಧದ ದುರಂತ ಅಂತ್ಯ: ಮದುವೆಗೆ ಒತ್ತಾಯಿಸಿದ್ದ ಮಹಿಳೆಯನ್ನು ಕೊಲೆಗೈದು ಮೃತದೇಹ ಸುಟ್ಟ ಆರೋಪ; ತನಿಖೆ ಭೀತಿಗೆ ಆರೋಪಿ ಆತ್ಮಹತ್ಯೆ

ಮಂಡ್ಯ: ಅಕ್ರಮ ಸಂಬಂಧದ ಹಿನ್ನೆಲೆ ಮದುವೆಗೆ ಒತ್ತಾಯಿಸಿದ್ದ ಮಹಿಳೆಯನ್ನು ಕೊಲೆಗೈದು ಮೃತದೇಹವನ್ನು ಸುಟ್ಟು ಸಾಕ್ಷ್ಯ ನಾಶಪಡಿಸಿದ ಪ್ರಕರಣ ಮಂಡ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು, ಪ್ರಕರಣದ ತನಿಖೆ ತೀವ್ರಗೊಳ್ಳುತ್ತಿದ್ದಂತೆ ಪ್ರಮುಖ ಆರೋಪಿ ತನ್ನ ತಾಯಿಯೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದ ನಳಿನಿ ಎಂದು ಗುರುತಿಸಲಾಗಿದೆ. ಅವರು ವೈಯಕ್ತಿಕ ಕಾರಣಗಳಿಂದ ಪತಿಯಿಂದ ದೂರವಾಗಿ ಒಂಟಿಯಾಗಿ ವಾಸಿಸುತ್ತಿದ್ದರು ಎನ್ನಲಾಗಿದೆ. ಕೆಲ ತಿಂಗಳ ಹಿಂದೆ ದೇವಸ್ಥಾನವೊಂದರಲ್ಲಿ ರಾಜಶೇಖರ ಎಂಬಾತನ ಪರಿಚಯವಾಗಿದ್ದು, ಬಳಿಕ…

Read More

ಮುತ್ತತ್ತಿ ಕಾವೇರಿ ದುರಂತ: ಸೆಲ್ಫಿ ವೇಳೆ ಕಾಲು ಜಾರಿ ಬಿದ್ದ ಮಹಿಳೆ ರಕ್ಷಿಸಲು ಹೋಗಿ ಐವರು ನೀರುಪಾಲು

ಮಂಡ್ಯ, ಜೂ. 24: ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ಕಾವೇರಿ ನದಿಗೆ ಬಿದ್ದ ಮಹಿಳೆಯನ್ನು ರಕ್ಷಿಸಲು ಧಾವಿಸಿದ್ದ ಕುಟುಂಬ ಸದಸ್ಯರು ಹಾಗೂ ಕಾರು ಚಾಲಕ ಸೇರಿದಂತೆ ಒಟ್ಟು ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿ ಸಮೀಪದ ಕಾವೇರಿ ನದಿಯಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಜಗದಪುರ ಗ್ರಾಮದ ನಿವಾಸಿಗಳಾದ ವಿಜಯಮ್ಮ (52), ಅವರ ಪುತ್ರಿಯರಾದ ಪ್ರಿಯಾಂಕ, ಶ್ವೇತಾ (38) ಮತ್ತು…

Read More

ಅಕ್ಟೋಬರ್-ನವೆಂಬರ್‌ನಲ್ಲಿ ಮಹಿಳೆಯರಿಗಾಗಿ ‘ಸಮೃದ್ಧಿ ಶಕ್ತಿ’ ಯೋಜನೆ ಜಾರಿ: ಶಾಸಕ ಸಮೃದ್ಧಿ ಮಂಜುನಾಥ

ಮಳವಳ್ಳಿ: ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಗುರಿಯಾಗಿಸಿಕೊಂಡು ಮುಂದಿನ ಅಕ್ಟೋಬರ್-ನವೆಂಬರ್ ತಿಂಗಳಿನಲ್ಲಿ ‘ಸಮೃದ್ಧಿ ಶಕ್ತಿ’ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ ತಿಳಿಸಿದರು. ಪಟ್ಟಣದಲ್ಲಿನ ಗುರುವಾರದಂದು ಸಮೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 36ನೇ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಯಾರಿಗೂ ಮೋಸ ಮಾಡಿಲ್ಲ. ಆದರೆ ಮಂಡ್ಯ ಜಿಲ್ಲೆಗೆ ಮೋಸ ಮಾಡಿದವರೇ ಹೆಚ್ಚು ಎಂಬ ಬೇಸರ ವ್ಯಕ್ತಪಡಿಸಿದರು. ಮಹಿಳೆಯರ ಸಬಲೀಕರಣಕ್ಕಾಗಿ ಸಮೃದ್ಧಿ ಸಂಸ್ಥೆ ವಿಶೇಷವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರಿಗೆ ಸಾಲ ಸೌಲಭ್ಯ ಒದಗಿಸುವ ಮೂಲಕ…

Read More

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ, ಸಸಿ ನೆಟ್ಟು ಸಂಭ್ರಮ

ಮಳವಳ್ಳಿ: ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ನಾರಾಯಣಗೌಡರ 60ನೇ ಹುಟ್ಟುಹಬ್ಬದ ಅಂಗವಾಗಿ ಮಳವಳ್ಳಿ ತಾಲ್ಲೂಕು ಘಟಕದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಹಾಗೂ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಕರವೇ ತಾಲ್ಲೂಕು ಅಧ್ಯಕ್ಷ ಅಪ್ಪೇಗೌಡ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು. ಬಳಿಕ ಮಾತನಾಡಿದ ಅವರು, ಕನ್ನಡ ನಾಡು, ನುಡಿ, ಸಂಸ್ಕೃತಿಯ ಉಳಿವು ಮತ್ತು ಬೆಳವಣಿಗೆಗಾಗಿ ನಿರಂತರ ಹೋರಾಟ ನಡೆಸುತ್ತಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರ…

Read More

ಬಾಲಕಿಯರನ್ನು ಪ್ರಾಣಿಗಳಂತೆ ನಡೆಸಿಕೊಂಡ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಬಿ.ವೀರಪ್ಪ ಖಂಡನೆ!

ಮಂಡ್ಯ, ಮೇ.23: ನಗರದ ಬಂದೀಗೌಡ ಬಡಾವಣೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ವಿದ್ಯಾರ್ಥಿನಿಯರ ವಾಸದ ಪರಿಸ್ಥಿತಿ ಹಾಗೂ ಮೂಲಭೂತ ಸೌಲಭ್ಯಗಳ ಕೊರತೆಯನ್ನು ಕಂಡು ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪರಿಶೀಲನೆ ವೇಳೆ ಒಂದೇ ಕೊಠಡಿಯಲ್ಲಿ 13 ವಿದ್ಯಾರ್ಥಿನಿಯರು ವಾಸಿಸುತ್ತಿರುವುದು ಬೆಳಕಿಗೆ ಬಂದಿದ್ದು, ಇದರಿಂದ ಆಕ್ರೋಶಗೊಂಡ ಉಪ ಲೋಕಾಯುಕ್ತರು, “ಇವರು ಮಕ್ಕಳು ಎಂದು ತಿಳ್ಕೊಂಡಿದ್ದೀರಾ…

Read More

​ಮಂಡ್ಯದಲ್ಲಿ ಭೀಕರ ಕೆಮಿಕಲ್ ಟ್ಯಾಂಕ್ ಸ್ಫೋಟ: ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸಾವು. ನಾಲ್ವರಿಗೆ ಗಂಭೀರ ಗಾಯ

ಮಂಡ್ಯ: ಜಿಲ್ಲೆಯ ತಾಲ್ಲೂಕಿನ ಬಸರಾಳು ಹೋಬಳಿಯ ಕಾರೇಕಟ್ಟೆ ಗ್ರಾಮದ ಸಮೀಪವಿರುವ ‘ಕೀರ್ತಿ ಕೆಮಿಕಲ್ ಕಾರ್ಖಾನೆ’ಯಲ್ಲಿ ಭಾನುವಾರ ರಾಸಾಯನಿಕ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಭೀಕರವಾಗಿ ಮೃತಪಟ್ಟಿದ್ದಾರೆ. ಕಾರ್ಖಾನೆಯ ಸಾಮಗ್ರಿಗಳನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ​ಛಿದ್ರಗೊಂಡ ದೇಹಗಳು: ​ಬಿಹಾರ ಮೂಲದ ಕಲೂಪ್‌ಖಾನ್ (27) ಮತ್ತು ಅಶೋಕ್ (26) ಮೃತಪಟ್ಟ ದುರ್ದೈವಿಗಳು. ಟ್ಯಾಂಕ್ ಸ್ಫೋಟಗೊಂಡ ರಭಸಕ್ಕೆ ಇಬ್ಬರು ಕಾರ್ಮಿಕರ ದೇಹಗಳು ಛಿದ್ರಛಿದ್ರಗೊಂಡು ನೂರಾರು ಅಡಿ ದೂರಕ್ಕೆ ಎಸೆಯಲ್ಪಟ್ಟಿವೆ. ಘಟನೆಯಲ್ಲಿ ಖಾಸಿಂ, ರವಿ, ಮಹಾಂತೇಶ್ ಹಾಗೂ ರಾಜೀವ್‌ಕುಮಾರ್…

Read More