ಬಿಡದಿ ಟೌನ್‌ಶಿಪ್‌ಗೆ ರೈತರ ತೀವ್ರ ವಿರೋಧ: ಜೆಎಂಸಿ ಸರ್ವೆ ವೇಳೆ ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ, ಬೈರಮಂಗಲದಲ್ಲಿ ಉದ್ವಿಗ್ನ ಪರಿಸ್ಥಿತಿ
ರಾಮನಗರ, ಜು.13: ಉದ್ದೇಶಿತ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕೆ ವಿರೋಧವಾಗಿ ರಾಮನಗರ ಜಿಲ್ಲೆಯ ಬೈರಮಂಗಲದಲ್ಲಿ ರೈತರ ಹೋರಾಟ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಜಂಟಿ ಅಳತೆ (ಜೆಎಂಸಿ) ಸರ್ವೆ ನಡೆಸಲು ಬಂದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ರೈತ ಮಹಿಳೆಯರು ಪೊರಕೆಯಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಕರೂರು ಹಾಗೂ ಭಾರಂಗಿ ವ್ಯಾಪ್ತಿಯ ರೈತರು ಬೈರಮಂಗಲ ಸರ್ಕಲ್‌ನಲ್ಲಿ ‘ಪೊರಕೆ…

