ರಾಯಚೂರಿನಲ್ಲಿ ಕಟ್ಟಡದ ಚಾವಣಿ ಕುಸಿತ ದುರಂತ: ಮೂವರು ವಿದ್ಯಾರ್ಥಿಗಳ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

ರಾಯಚೂರು: ನಗರದ ಬಸ್ ನಿಲ್ದಾಣದ ಸಮೀಪದ ವಿಆರ್‌ಎಲ್ ಕಚೇರಿ ಬಳಿ ಇರುವ ಕಟ್ಟಡವೊಂದರ ಚಾವಣಿ ಭಾನುವಾರ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಘಟನೆಯಲ್ಲಿ ನಾಗರಾಜ್ ಕ್ಯಾದಿಗೇರಾ (21) ಹಾಗೂ ರವಿ ಕುಮಾರ ಸಮುದ್ರ (22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಅರ್ಜುನ್ ಕೋತಿಗುಡ್ಡ ಅವರನ್ನು ತಕ್ಷಣ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೂಡ ಮೃತಪಟ್ಟಿದ್ದಾರೆ. ಪ್ರಭು ಮಾತ್ರಳ್ಳಿ ಹಾಗೂ ಉಮೇಶ್ ಎಚ್.ಎನ್….

Read More

ರಾಯಚೂರು: ಜಾತ್ರೆ ಮುಗಿಸಿ ಮರಳುವಾಗ ಭೀಕರ ಅಪಘಾತ; ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾತ್ರೆಯ ಸಂಭ್ರಮದಲ್ಲಿದ್ದ ಕುಟುಂಬವೊಂದು ದುರಂತ ಅಂತ್ಯ ಕಂಡಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ​ಘಟನೆಯ ವಿವರ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಈ ದುರಂತ ನಡೆದಿದೆ. ಮೃತರನ್ನು ಬೈಕ್ ಚಾಲನೆ ಮಾಡುತ್ತಿದ್ದ ಅಂಜಿನಯ್ಯ ನಾಯಕ (37) ಮತ್ತು ಹತ್ತು ವರ್ಷದ ಬಾಲಕಿ ಅರ್ಚನಾ…

Read More