ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಬ್ರೇಕ್: ಹೊಸ ಮುಖಗಳಿಗೆ ಮಣೆ ಹಾಕಲು ರಾಹುಲ್ ಗಾಂಧಿ ಸೂಚನೆ
ನವದೆಹಲಿ: ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಕಸರತ್ತಿಗೆ ಸದ್ಯಕ್ಕೆ ಮತ್ತೆ ಕಾರ್ಮೋಡ ಕವಿದಿದೆ. ಗುರುವಾರ ನವದೆಹಲಿಯಲ್ಲಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಹೈಕಮಾಂಡ್ ನಾಯಕರೊಂದಿಗಿನ ಸಭೆಯು ಯಾವುದೇ ಅಂತಿಮ ನಿರ್ಧಾರವಿಲ್ಲದೆ ಅಪೂರ್ಣಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧಪಡಿಸಿ ತಂದಿದ್ದ ಭಾವೀ ಸಚಿವರ ಪಟ್ಟಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಪ್ಪಿಗೆ ನೀಡಿಲ್ಲ. ಅಷ್ಟೇ ಅಲ್ಲದೆ, ತಮ್ಮದೇ ಆದ ಪ್ರತ್ಯೇಕ ಪಟ್ಟಿಯೊಂದನ್ನು ಮುಂದಿಡುವ ಮೂಲಕ ರಾಜ್ಯ…

