ವಿಜಯನಗರ: ಡಣಾಪುರ ಬಳಿ ಭೀಕರ ಸರಣಿ ಅಪಘಾತ; ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ಸಾವು
ವಿಜಯನಗರ: ಜಿಲ್ಲೆಯ ಡಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ಒಟ್ಟು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 25ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಕಿತ್ತೂರು ಗ್ರಾಮದ ನಾಗಪ್ಪ (56), ಇವರ ಪುತ್ರ ಕೊಟ್ರೇಶ್ (22), ಪುತ್ರಿ ಸುಜಾತಾ (35) ಹಾಗೂ ತಿಮ್ಮಲಾಪುರ ಗ್ರಾಮದ ದುರುಗಪ್ಪ (55) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಿತ್ತೂರು ಗ್ರಾಮದ ಈ ನಾಲ್ವರು ಎರಡು…

