ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹ: ಕ್ರಮಕ್ಕೆ ಆಗ್ರಹಿಸಿ ಸ್ವಾಭಿಮಾನಿ ಕರವೇ ಪ್ರತಿಭಟನೆ
ರಾಣೇಬೆನ್ನೂರು: ತಾಲೂಕಿನಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ನಿಯಮಬಾಹಿರವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದನ್ನು ಖಂಡಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸಾರ್ವಜನಿಕರ ಜೀವಕ್ಕೆ ಸಂಚಕಾರ ತರುತ್ತಿರುವ ಇಂತಹ ದಂಧೆಯ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಅವರು, ತಾಲೂಕಿನಾದ್ಯಂತ ಹೆಚ್.ಪಿ, ಇಂಡಿಯನ್ ಹಾಗೂ ಭಾರತ ಗ್ಯಾಸ್ ಏಜೆನ್ಸಿಗಳು ಸೇರಿದಂತೆ ವಿವಿಧ ಸಂಸ್ಥೆಗಳು ಎಲ್ಲೆಂದರಲ್ಲಿ…

