ಹಾವೇರಿ ಸಮಾವೇಶಕ್ಕೆ ಬಸ್ ನಿಯೋಜನೆ: ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ರೈತ ಸಂಘದ ಆತಂಕ
ರಾಣೇಬೆನ್ನೂರು: ಹಾವೇರಿಯಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಿರುವುದನ್ನು ರೈತ ಸಂಘಟನೆಯ ಮುಖಂಡ ಹನುಮಂತಪ್ಪ ಕಬ್ಬಾರ ತೀವ್ರವಾಗಿ ಖಂಡಿಸಿದ್ದಾರೆ. ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯ ಈ ಕ್ರಮದಿಂದ ವಿದ್ಯಾರ್ಥಿಗಳು ಹಾಗೂ ರೈತರಿಗೆ ತೊಂದರೆಯಾಗುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪ್ರಸ್ತುತ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗಳು ಜರುಗುತ್ತಿದ್ದು, ಶನಿವಾರವೂ ಪರೀಕ್ಷೆ ನಿಗದಿಯಾಗಿದೆ. ಇಂತಹ ಸಂದರ್ಭದಲ್ಲಿ ಹಳ್ಳಿಗಳಿಗೆ…

