ಬಜೆಟ್ ದಿನವೇ ಬಂಗಾರ ಪ್ರಿಯರಿಗೆ ಬಂಪರ್ ಕೊಡುಗೆ: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ,

​ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸುಸಂದರ್ಭದಲ್ಲೇ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ದಿಢೀರ್ ಕುಸಿತ ಕಂಡಿದ್ದು, ಗ್ರಾಹಕರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಏರಿಕೆಯ ಹಾದಿಯಲ್ಲಿದ್ದ ಬೆಲೆಗಳು ಈಗ ಹೂಡಿಕೆದಾರರು ಮತ್ತು ಸಾಮಾನ್ಯ ಜನರಿಗೆ ನಿರಾಳ ತಂದಿವೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಸುಮಾರು 1,47,200 ರೂ. ತಲುಪಿದ್ದರೆ, 24 ಕ್ಯಾರೆಟ್‌ನ ಅಪರಂಜಿ ಚಿನ್ನದ ಬೆಲೆ 1,60,580…

Read More

ಸಿನಿಮಾ ಮನರಂಜನೆಯ ಜೊತೆಗೆ ಸಮಾಜ ಪರಿವರ್ತನೆಯ ಸಾಧನವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಿನಿಮಾ ಕೇವಲ ಮನರಂಜನೆಗೆ ಸೀಮಿತವಾಗದೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಶಕ್ತಿಯುತ ಮಾಧ್ಯಮವಾಗಬೇಕು. ಸಮಾಜದಲ್ಲಿ ಅಸಮಾನತೆ ಅಸ್ತಿತ್ವದಲ್ಲಿದ್ದು, ಮಹಿಳೆಯರು, ಹಿಂದುಳಿದವರು, ರೈತರು ಹಾಗೂ ದಲಿತ ಸಮುದಾಯಗಳು ಇಂದಿಗೂ ಅಸಮಾನತೆಯ ಸಂಕಷ್ಟವನ್ನು ಎದುರಿಸುತ್ತಿವೆ. ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ ಸಿನಿಮಾ ಮಾಧ್ಯಮ ಕಾರ್ಯನಿರ್ವಹಿಸಿದಾಗ ಅದರ ಆಶಯ ಮತ್ತು ಉದ್ದೇಶ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ”ದ ಉದ್ಘಾಟನಾ ಸಮಾರಂಭದಲ್ಲಿ…

Read More

ವಿಧಾನಸೌಧದಲ್ಲಿ ಹೈಡ್ರಾಮಾ: ಭಾಷಣ ಓದದೇ ಹೊರನಡೆದ ರಾಜ್ಯಪಾಲರು, ದಾರಿ ತಡೆದ ಕಾಂಗ್ರೆಸ್ ನಾಯಕರು

ಬೆಂಗಳೂರು, ಜ. 22: ರಾಜ್ಯದ ವಿಧಾನಮಂಡಲದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಹೈಡ್ರಾಮಾಕ್ಕೆ ಗುರುವಾರ ವಿಧಾನಸೌಧದ ಜಂಟಿ ಅಧಿವೇಶನ ಸಾಕ್ಷಿಯಾಯಿತು. ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಶೀತಲ ಸಮರ ಸ್ಫೋಟಗೊಂಡಿದ್ದು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ನಿರಾಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ಕೇವಲ ಎರಡೇ ನಿಮಿಷದಲ್ಲಿ ಭಾಷಣ ಮುಗಿಸಿ ಸದನದಿಂದ ಹೊರನಡೆಯುವ ಮೂಲಕ ಸರ್ಕಾರಕ್ಕೆ ಸೆಡ್ಡು ಹೊಡೆದರು. ​ಸಂಪ್ರದಾಯದಂತೆ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಲು ಆಗಮಿಸಿದ ರಾಜ್ಯಪಾಲರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ…

Read More

ಬಿಗ್ ಬಾಸ್ ಕಿರೀಟ ಮುಡಿಗೇರಿಸಿಕೊಂಡ ‘ಗಿಲ್ಲಿ’ ನಟರಾಜ್: ಮಂಡ್ಯದ ಪ್ರತಿಭೆಗೆ ಒಲಿದ 50 ಲಕ್ಷ ಬಹುಮಾನ!

​ಬೆಂಗಳೂರು: ನೂರಕ್ಕೂ ಹೆಚ್ಚು ದಿನಗಳ ಕಾಲ ಕನ್ನಡಿಗರಿಗೆ ಭರ್ಜರಿ ಮನರಂಜನೆ ನೀಡಿದ ಕಲರ್ಸ್ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ಕ್ಕೆ ಭಾನುವಾರ (ಜ. 18) ಅದ್ದೂರಿ ತೆರೆ ಬಿದ್ದಿದೆ. ತೀವ್ರ ಕುತೂಹಲ ಕೆರಳಿಸಿದ್ದ ಫಿನಾಲೆ ಹಂತದಲ್ಲಿ ಹಾಸ್ಯ ಕಲಾವಿದ, ಮಂಡ್ಯದ ಪ್ರತಿಭೆ ಗಿಲ್ಲಿ ನಟರಾಜ್ (ಗಿಲ್ಲಿ ನಟ) ಅವರು ವಿಜೇತರಾಗಿ ಹೊರಹೊಮ್ಮುವ ಮೂಲಕ ‘ಬಿಗ್ ಬಾಸ್’ ಟ್ರೋಫಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ​ಸುಮಾರು 112 ದಿನಗಳ ರೋಚಕ ಪಯಣದ ನಂತರ ನಡೆದ ಅದ್ದೂರಿ ಗ್ರಾಂಡ್…

Read More

ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್‌ ಮಾಧ್ಯಮ ವಕ್ತಾರರಾಗಿ ಮರಸಪ್ಪ ರವಿ ನೇಮಕ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್‌ ಸಮಿತಿಯ (ಡಿಸಿಸಿ) ಮಾಧ್ಯಮ ವಕ್ತಾರರಾಗಿ ಕನಕಪುರ ಪಟ್ಟಣದ ಮಳಗಾಳಿನ ಮರಸಪ್ಪ ರವಿ ಅವರು ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ, ಕೆಪಿಸಿಸಿ ಮಾಧ್ಯಮ ವಕ್ತಾರರು ಹಾಗೂ ವಿಧಾನ ಪರಿಷತ್ ಸದಸ್ಯರಾದ ರಮೇಶ್ ಬಾಬು ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಮರಸಪ್ಪ ರವಿ ಅವರು ಈ ಹಿಂದೆ ಸುದೀರ್ಘ ಅವಧಿಯವರೆಗೆ ರಾಮನಗರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದರು. ಅವರ ಅನುಭವ ಮತ್ತು…

Read More

​ರಾಜ್ಯ ಸರ್ಕಾರಕ್ಕೆ ‘ಕ್ರೆಡಲ್‌’ನಿಂದ ₹77.17 ಕೋಟಿ ಡಿವಿಡೆಂಡ್; ಸಿಎಂ ಪರಿಹಾರ ನಿಧಿಗೆ ₹5 ಕೋಟಿ ದೇಣಿಗೆ

​ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತವು (KREDL) 2024-25ನೇ ಸಾಲಿನಲ್ಲಿ ಭರ್ಜರಿ ಲಾಭ ಗಳಿಸಿದ್ದು, ಸರ್ಕಾರಕ್ಕೆ ಸಲ್ಲಿಸಬೇಕಾದ ಲಾಭಾಂಶ (ಡಿವಿಡೆಂಡ್) ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯ ಮೊತ್ತದ ಚೆಕ್ ಅನ್ನು ಗುರುವಾರ ಹಸ್ತಾಂತರಿಸಲಾಯಿತು. ​ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಟ್ಟು 77,17,50,000 ರೂ.ಗಳ ಡಿವಿಡೆಂಡ್ ಚೆಕ್ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಪ್ರತ್ಯೇಕ ಚೆಕ್ ಅನ್ನು ಹಸ್ತಾಂತರಿಸಿದರು. ​ನಿವ್ವಳ ಲಾಭದಲ್ಲಿ ದಾಖಲೆ: ಕ್ರೆಡಲ್‌…

Read More

ಪೊಲೀಸರ ನಡೆ ಅತ್ಯಂತ ಖಂಡನೀಯ: ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲಿನ ದೌರ್ಜನ್ಯಕ್ಕೆ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯ ಮತ್ತು ಅಮಾನವೀಯ ನಡವಳಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ತೀವ್ರವಾಗಿ ಖಂಡಿಸಿದ್ದಾರೆ. “ಹುಬ್ಬಳ್ಳಿಯ ಪೊಲೀಸ್ ಅಧಿಕಾರಿಗಳು ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಮಾಡುವುದನ್ನು ಬಿಟ್ಟು, ಅಮಾಯಕರ ಮೇಲೆ ಎಫ್‌ಐಆರ್ ದಾಖಲಿಸುವುದೇ ಕೆಲಸ ಎಂದು ಭಾವಿಸಿದಂತಿದೆ” ಎಂದು ಅವರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ​ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಕುರಿತು ಅತ್ಯಂತ ಆಘಾತಕಾರಿ…

Read More

​ಯಾವ ಪುರುಷಾರ್ಥಕ್ಕಾಗಿ ಕಾಂಗ್ರೆಸ್ ಹೋರಾಟ?: ವಿಬಿ-ಗ್ರಾಮ್ ಜಿ ಯೋಜನೆ ಕುರಿತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಖಾರವಾದ ಪ್ರಶ್ನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಜೀವನೋಪಾಯ ಮಿಷನ್’ (VB-GRAM G) ಯೋಜನೆ ವಿರುದ್ಧ ಹೋರಾಟಕ್ಕೆ ಕರೆ ನೀಡಿರುವ ಕಾಂಗ್ರೆಸ್ ಪಕ್ಷದ ನೈತಿಕತೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನಾಯಕರು ಯಾವ ಪುರುಷಾರ್ಥಕ್ಕಾಗಿ ಮತ್ತು ಯಾವ ಆಧಾರದ ಮೇಲೆ ಈ ಹೋರಾಟ ಮಾಡುತ್ತಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಸವಾಲು ಹಾಕಿದ್ದಾರೆ. ​ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ…

Read More

​ಕೇಂದ್ರ ಸಚಿವ ವಿ. ಸೋಮಣ್ಣ ಮೇಲೆ ಹಲ್ಲೆ ಯತ್ನ: ಡಿಜಿಪಿ ಕಚೇರಿ ಮೆಟ್ಟಿಲೇರಿ ಡಿಜಿಪಿಗೆ ಮನವಿ ನೀಡಿದ ಕೊಪ್ಪಳ ಬಿಜೆಪಿ ನಿಯೋಗ

ಬೆಂಗಳೂರು: ಕೊಪ್ಪಳ ಜಿಲ್ಲೆಯ ಹಿಟ್ನಾಳ್ ಗ್ರಾಮದಲ್ಲಿ ಇತ್ತೀಚೆಗೆ ನಡೆದ ರೈಲ್ವೆ ಮೇಲ್ಸೇತುವೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಮೇಲೆ ನಡೆದ ಹಲ್ಲೆ ಯತ್ನವನ್ನು ಖಂಡಿಸಿ, ಕೊಪ್ಪಳ ಜಿಲ್ಲಾ ಬಿಜೆಪಿ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP) ಅಧಿಕೃತ ದೂರು ಸಲ್ಲಿಸಿದೆ. ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಬಸವರಾಜ ದಡೇಸೂಗೂರು ಅವರ ನೇತೃತ್ವದ ನಿಯೋಗವು ಗುರುವಾರ ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಈ ಮನವಿ ಸಲ್ಲಿಸಿತು. ​ದೂರಿನ ಸಾರಾಂಶದಂತೆ, ಕಳೆದ…

Read More

ಮಾನ್ಯ ಹತ್ಯೆ ಪ್ರಕರಣ: ತ್ವರಿತಗತಿ ನ್ಯಾಯಾಲಯ ಸ್ಥಾಪನೆ ಹಾಗೂ ಕಟ್ಟುನಿಟ್ಟಿನ ಹೊಸ ಕಾನೂನು ಜಾರಿಗೆ ಸಿಎಂ ಸಿದ್ದರಾಮಯ್ಯ ಶೀಘ್ರದಲ್ಲೇ ಘೋಷಣೆ

ಬೆಂಗಳೂರು: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಯುವತಿ ಮಾನ್ಯ ಎಂಬಾಕೆಯ ಮರ್ಯಾದಾಗೇಡು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಸಂತ್ರಸ್ತ ಕುಟುಂಬಕ್ಕೆ ತ್ವರಿತ ನ್ಯಾಯ ಒದಗಿಸಲು ವಿಶೇಷ ಕ್ರಮಗಳನ್ನು ಪ್ರಕಟಿಸಿದೆ. ಈ ಪ್ರಕರಣದ ವಿಚಾರಣೆಗಾಗಿ ‘ತ್ವರಿತಗತಿ ನ್ಯಾಯಾಲಯ’ (Fast-track Court) ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ​ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, “ಇದು ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣವಾಗಿದೆ. ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ನಿಯಮದಂತೆ 60 ದಿನಗಳ ಒಳಗಾಗಿ…

Read More