ಪರಪ್ಪನ ಅಗ್ರಹಾರದಲ್ಲೂ ಮುಗಿಯದ ಕಾಮಪಿಶಾಚಿಯ ವಿಕೃತಿ: ಕಂಬಿ ಎಣಿಸುತ್ತಿದ್ದರೂ ಬುದ್ಧಿ ಕಲಿಯದ ಪ್ರಜ್ವಲ್ ರೇವಣ್ಣ!

ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕಾರಾಗೃಹದ ಒಳಗೂ ತನ್ನ ವಿಕೃತ ಮನಸ್ಥಿತಿ ಹಾಗೂ ಕಾಮದ ದಾಹವನ್ನು ತೀರಿಸಿಕೊಳ್ಳುತ್ತಿರುವುದು ಬಯಲಿಗೆ ಬಂದಿದ್ದು, ಸಮಾಜವೇ ತಲೆ ತಗ್ಗಿಸುವಂತಾಗಿದೆ. ಹೆಣ್ಣುಮಕ್ಕಳ ಜೀವ ಹಾಗೂ ಮಾನದೊಂದಿಗೆ ಚೆಲ್ಲಾಟವಾಡಿ, ಕಾನೂನಿನ ಕಟ್ಟುನಿಟ್ಟಿನ ಚಾಟಿ ಏಟಿಗೆ ಜೈಲು ಪಾಲಾಗಿದ್ದರೂ ಈತನಿಗೆ ಕನಿಷ್ಠ ಪಶ್ಚಾತ್ತಾಪವಾಗಲಿ ಅಥವಾ ಬುದ್ಧಿಯಾಗಲಿ ಬಂದಿಲ್ಲದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಜೈಲಿನಲ್ಲಿ ರಾಜಾತಿಥ್ಯ ಅನುಭವಿಸುತ್ತಾ, ಅಕ್ರಮವಾಗಿ ಮೊಬೈಲ್ ಬಳಸಿ ತನ್ನ ವಿಕೃತ ಆನಂದವನ್ನು ಮುಂದುವರಿಸಿದ್ದ…

Read More

ಸಚಿವ ಸತೀಶ್ ಜಾರಕಿಹೊಳಿ ಕುಟುಂಬದ ವಿದೇಶಿ ಹೂಡಿಕೆಗಳ ಆರೋಪ: 21 ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು ಜಪ್ತಿ

ಬೆಂಗಳೂರು, ಸೆ.11: ಕರ್ನಾಟಕ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತ ಸಹಚರರಿಗೆ ಸಂಬಂಧಿಸಿದ ಬೆಂಗಳೂರು, ಬೆಳಗಾವಿ, ಗೋಕಾಕ ಮತ್ತು ಕೋಲ್ಕತ್ತಾದ ನಾಲ್ಕು ಸ್ಥಳಗಳಲ್ಲಿನ 21 ಆವರಣಗಳಲ್ಲಿ ಜಾರಿ ನಿರ್ದೇಶನಾಲಯ (ED) ಸೆ.9 ಮತ್ತು 10ರಂದು ಶೋಧ ಕಾರ್ಯಾಚರಣೆ ನಡೆಸಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿಯಲ್ಲಿ ಈ ಶೋಧ ನಡೆಸಲಾಗಿದ್ದು, ಜಾರಕಿಹೊಳಿ ಕುಟುಂಬದ ಬಹಿರಂಗಪಡಿಸದ ವಿದೇಶಿ ಹೂಡಿಕೆಗಳು, ಗಡಿಯಾಚೆಗಿನ ವ್ಯವಹಾರ ಸಂಬಂಧಗಳು ಹಾಗೂ ಶಂಕಿತ ಹಣಕಾಸು ಅಕ್ರಮಗಳ ಕುರಿತು ತನಿಖೆ ನಡೆಸಿ ಮಾಹಿತಿ…

Read More

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ; ಬೆಂಗಳೂರಿನ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

ಬೆಂಗಳೂರು, ಸೆ. 9: ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬುಧವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ಮನೆಯಲ್ಲಿ ಮಹತ್ವದ ದಾಖಲೆಗಳು ಹಾಗೂ ಇತರೆ ವಿವರಗಳ ಪರಿಶೀಲನೆ ನಡೆಸಲಾಗುತ್ತಿದೆ. ಇಂದು ಬೆಳಗ್ಗೆ ಎರಡು ಪ್ರತ್ಯೇಕ ಕಾರುಗಳಲ್ಲಿ ಆಗಮಿಸಿದ ಇಡಿ ಅಧಿಕಾರಿಗಳ ತಂಡ ಸಚಿವರ ನಿವಾಸಕ್ಕೆ ಪ್ರವೇಶಿಸಿ ಶೋಧ ಕಾರ್ಯ ಆರಂಭಿಸಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ, ಬಾರ್ ಲೈಸೆನ್ಸ್ ಅಕ್ರಮ…

Read More

101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಿ ಎಂ, ಡಿ.ಕೆ. ಶಿವಕುಮಾರ್

101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಡಿ.ಕೆ. ಶಿವಕುಮಾರ್ ಬೆಂಗಳೂರು: ರಾಜ್ಯದಲ್ಲಿ ಸಮರ್ಪಕ ಮಳೆಯಾಗದೆ ಅನ್ನದಾತರು ಆತಂಕಕ್ಕೀಡಾಗಿರುವುದು ಸರ್ಕಾರದ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ರೈತರ ಸಂಕಷ್ಟವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅವರ ನೆರವಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಜೂನ್ 1ರಿಂದ 2026ರ ಆಗಸ್ಟ್ 21ರವರೆಗೆ ರಾಜ್ಯದ 29 ಜಿಲ್ಲೆಗಳಲ್ಲಿ ಮಳೆ ಕೊರತೆ ದಾಖಲಾಗಿದ್ದು, ಕೇವಲ ಎರಡು ಜಿಲ್ಲೆಗಳಲ್ಲಿ ಮಾತ್ರ ಸಾಮಾನ್ಯ ಮಳೆಯಾಗಿದೆ. ತಾಲೂಕು ಮಟ್ಟದಲ್ಲಿ 176 ತಾಲೂಕುಗಳು…

Read More

ಗೃಹ ಮಂಡಳಿ ಅಧ್ಯಕ್ಷ ಶ್ರೀನಿವಾಸ ಮಾನೆಗೆ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ಕರ್ನಾಟಕ ಗೃಹ ಮಂಡಳಿ (ಕೆಎಚ್‌ಬಿ) ಅಧ್ಯಕ್ಷ ಶ್ರೀನಿವಾಸ ಮಾನೆ ಅವರಿಗೆ ರಾಜ್ಯ ಸರ್ಕಾರ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಸ್ಥಾನಮಾನ ಅನ್ವಯವಾಗಲಿದೆ ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಜ್ಯಪಾಲರ ಆದೇಶಾನುಸಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಆಗಸ್ಟ್ 17ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ. ಶ್ರೀನಿವಾಸ ಮಾನೆ ಅವರಿಗೆ ಸಂಪುಟ ದರ್ಜೆ ಸಚಿವರಿಗೆ ಅನ್ವಯಿಸುವ ಎಲ್ಲಾ ಅಧಿಕೃತ ಸೌಲಭ್ಯಗಳನ್ನು…

Read More

ವಾಲ್ಮೀಕಿ ನಿಗಮ ಅಕ್ರಮ ಪ್ರಕರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಬಿಜಿಪಿ-ಜೆಡಿಎಸ್ ಪಟ್ಟು, ಸದನದಲ್ಲಿ ಗದ್ದಲ

ಬೆಂಗಳೂರ:ಸದನದ ಉಭಯ ಸೌಧಗಳಲ್ಲಿ ಪ್ರತಿಪಕ್ಷಗಳ ಆಕ್ರೋಶ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮ ಪ್ರಕರಣದ ಕಾವು ಮುಂಗಾರು ಅಧಿವೇಶನದಲ್ಲಿ ತೀವ್ರಗೊಂಡಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ವಿಧಾನಪರಿಷತ್ ಹಾಗೂ ವಿಧಾನಸಭೆಯಲ್ಲಿ ಭಾರಿ ಪ್ರತಿಭಟನೆ ನಡೆಸಿದರು. ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳ ಸದಸ್ಯರು “ಮೊದಲು ರಾಜೀನಾಮೆ, ನಂತರ ಕಲಾಪ” ಎಂದು ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಪಡಿಸಿದರು. ​ಸದನದಲ್ಲಿ ವಾಕ್ಸಮರ ಮತ್ತು ಆಡಳಿತ ಪಕ್ಷದ ತಿರುಗೇಟು…

Read More

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ; ಪರಪ್ಪನ ಅಗ್ರಹಾರ ಜೈಲು ಅಧೀಕ್ಷಕರಿಗೆ ಶೋಕಾಸ್, ಎಎಸ್‌ಪಿ ಅಮಾನತು

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅತ್ಯಾಚಾರ ಪ್ರಕರಣದ ಶಿಕ್ಷೆಗೊಳಗಾದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಹಿನ್ನೆಲೆಯಲ್ಲಿ ಕಾರಾಗೃಹದ ಮುಖ್ಯ ಅಧೀಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದ್ದು, ಭದ್ರತಾ ವಿಭಾಗದ ಉಸ್ತುವಾರಿ ಸಹಾಯಕ ಅಧೀಕ್ಷಕ (ಎಎಸ್‌ಪಿ) ಈರಣ್ಣ ರಂಗಾಪುರ ಅವರನ್ನು ಅಮಾನತುಗೊಳಿಸಿ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ. ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್ ಕುಮಾರ್, ಜೈಲಿನಲ್ಲಿ ನಿಷೇಧಿತ ವಸ್ತುಗಳು ಹಾಗೂ ಅಕ್ರಮ…

Read More

ರಾಜ್ಯಾದ್ಯಂತ ಗುಟ್ಕಾ, ನಿಕೋಟಿನ್ ಹಾಗೂ ಪಾನ್ ಮಸಾಲಾ ಉತ್ಪನ್ನಗಳಿಗೆ ಒಂದು ವರ್ಷದ ನಿಷೇಧ

ಬೆಂಗಳೂರು: ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ವಿರುದ್ಧ ಕರ್ನಾಟಕ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಇಂತಹ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತೆ ಇಲಾಖೆ ಆದೇಶ ಹೊರಡಿಸಿದೆ. ಆಗಸ್ಟ್ 10ರಂದು ಹೊರಡಿಸಿರುವ ಈ ಆದೇಶವು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅಡಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. ಗುಟ್ಕಾ ಮತ್ತು ಪಾನ್…

Read More

ರಾಜ್ಯ ಸಂಪುಟ ಪುನಾರಚನೆ ಬೆನ್ನಲ್ಲೇ ಸಿ ಎಂ, ಡಿ.ಕೆ. ಶಿವಕುಮಾರ್ ನೂತನ ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ರಾಜ್ಯ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಅನುಭವ, ಹಿರಿತನ ಹಾಗೂ ಆಡಳಿತ ಸಾಮರ್ಥ್ಯವನ್ನು ಪರಿಗಣಿಸಿ ಪ್ರಮುಖ ನಾಯಕರಿಗೆ ವಿವಿಧ ಇಲಾಖೆಗಳನ್ನು ನಿಗದಿಪಡಿಸಲಾಗಿದ್ದು, ಕೃಷಿ, ಶಿಕ್ಷಣ, ಆಹಾರ, ಸಹಕಾರ ಸೇರಿದಂತೆ ಸಾರ್ವಜನಿಕ ನೇರ ಸಂಪರ್ಕ ಹೊಂದಿರುವ ಇಲಾಖೆಗಳ ಹಂಚಿಕೆಗೆ ವಿಶೇಷ ಆದ್ಯತೆ ನೀಡಲಾಗಿದೆ. ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಗೆ ವೇಗ ನೀಡುವ ಉದ್ದೇಶದಿಂದ ಖಾತೆ ಹಂಚಿಕೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ….

Read More

ರಸ್ತೆ ಗಲಾಟೆ ಪ್ರಕರಣದ ಬೆನ್ನಲ್ಲೇ ಮಾಲೂರು ಪ್ರಧಾನ ಸಿವಿಲ್ ನ್ಯಾಯಾಧೀಶೆ ಗಾಯತ್ರಿ ಬೀದರ್ ಜಿಲ್ಲೆಗೆ ವರ್ಗಾವಣೆ

ಬೆಂಗಳೂರು: ರಸ್ತೆಯಲ್ಲಿ ನಡೆದ ಗಲಾಟೆ ಹಾಗೂ ಅಧಿಕಾರ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನಿಂದ ತೀವ್ರ ತರಾಟೆಗೆ ಒಳಗಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಗಾಯತ್ರಿ ಅವರನ್ನು ಬೀದರ್ ಜಿಲ್ಲೆಯ ಹುಮನಾಬಾದ್ ಪ್ರಧಾನ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಲಾಗಿದೆ. ಈ ಬೆಳವಣಿಗೆ ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಹಿನ್ನೆಲೆ ಪ್ರಕಾರ, ನ್ಯಾಯಾಧೀಶೆ ಗಾಯತ್ರಿ ಅವರು ಮಾಲೂರಿನಲ್ಲಿ ತಮ್ಮ ಖಾಸಗಿ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ…

Read More