ಜಿಪಂ, ತಾಪಂ ಚುನಾವಣೆ ಶೀಘ್ರ: ಸಮರ ಸನ್ನದ್ಧತೆಗೆ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ
ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಬಾಕಿ ಉಳಿದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ಗಳ ಚುನಾವಣೆಗೆ ಅಂತಿಮವಾಗಿ ಮುಹೂರ್ತ ನಿಗದಿಯಾಗುವ ಲಕ್ಷಣಗಳು ಕಾಣುತ್ತಿವೆ. ಚುನಾಯಿತ ಪ್ರತಿನಿಧಿಗಳಿಲ್ಲದೆ ಸುಮಾರು ಒಂದು ಅವಧಿಯನ್ನೇ ಪೂರೈಸುತ್ತಿರುವ ಸ್ಥಳೀಯ ಸಂಸ್ಥೆಗಳಿಗೆ ಮುಂದಿನ ಎರಡರಿಂದ ಮೂರು ತಿಂಗಳ ಅವಧಿಯಲ್ಲಿ ಚುನಾವಣೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಂಚಾಯತ್ ಚುನಾವಣೆಗಳನ್ನು ಎದುರಿಸಲು ಪಕ್ಷದ ಮುಖಂಡರು ಮತ್ತು…

