ಚನ್ನಪಟ್ಟಣ ತಹಶೀಲ್ದಾರ್ ಸರ್ಕಾರಿ ನಿವಾಸದಲ್ಲೇ ಭೀಕರ ಕೃತ್ಯ: ಅಸಹಜ ಲೈಂಗಿಕ ದೌರ್ಜನ್ಯ, ದರೋಡೆ, ಕೊಲೆ ಯತ್ನ ಆರೋಪ; ಓರ್ವ ಬಂಧನ

ಚನ್ನಪಟ್ಟಣ: ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆಯೇ ಅವರ ಸರ್ಕಾರಿ ನಿವಾಸದಲ್ಲಿ ಅಸಹಜ ಲೈಂಗಿಕ ದೌರ್ಜನ್ಯ, ದರೋಡೆ ಹಾಗೂ ಕೊಲೆ ಯತ್ನ ನಡೆದಿರುವ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಚನ್ನಪಟ್ಟಣ ತಹಶೀಲ್ದಾರ್ ಬಿ.ಎನ್. ಗಿರೀಶ್ ನೀಡಿರುವ ದೂರಿನ ಆಧಾರದ ಮೇಲೆ ಚನ್ನಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿ ಅನುಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪೊಲೀಸರ ಮಾಹಿತಿ ಪ್ರಕಾರ, ಮೈಸೂರು ಮೂಲದ ಅನುಶ್ ಎಂಬಾತನಿಗೆ ತಹಶೀಲ್ದಾರ್ ಬಿ.ಎನ್….

Read More

15 ನಿಮಿಷಗಳಲ್ಲಿ 108 ಅಂಬ್ಯುಲೆನ್ಸ್ ಸ್ಥಳಕ್ಕೆ ತಲುಪಬೇಕು: ವಿಳಂಬವಾದರೆ ₹5,000 ದಂಡ ಪ್ರಸ್ತಾವ – ಆರೋಗ್ಯ ಸಚಿವ ಯು.ಟಿ. ಖಾದರ್

ಬೆಂಗಳೂರು: ರಾಜ್ಯದಲ್ಲಿ ತುರ್ತು ವೈದ್ಯಕೀಯ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವ ಉದ್ದೇಶದಿಂದ 108 ತುರ್ತು ಅಂಬ್ಯುಲೆನ್ಸ್ ಸೇವೆಗೆ ಕಟ್ಟುನಿಟ್ಟಿನ ಸಮಯ ಮಿತಿಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ತುರ್ತು ಕರೆ ಬಂದ ಬಳಿಕ 15 ನಿಮಿಷಗಳೊಳಗೆ ಅಂಬ್ಯುಲೆನ್ಸ್ ಸ್ಥಳಕ್ಕೆ ತಲುಪಬೇಕು ಎಂಬ ನಿಯಮವನ್ನು ಜಾರಿಗೆ ತರಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು. ಸಚಿವರ ಪ್ರಕಾರ, ನಿಗದಿತ 15 ನಿಮಿಷಗಳ ಗಡುವಿನೊಳಗೆ ಅಂಬ್ಯುಲೆನ್ಸ್ ಸ್ಥಳಕ್ಕೆ ತಲುಪದಿದ್ದರೆ ಸಂಬಂಧಪಟ್ಟ ಸೇವಾ ಸಂಸ್ಥೆ…

Read More

ರೈತರ ಹಿತಾಸಕ್ತಿ ನಮ್ಮ ಸರ್ಕಾರದ ಆದ್ಯತೆ; ಎಂಎಸ್‌ಪಿ ಅಡಿ ಧಾನ್ಯ ಖರೀದಿ ಹಾಗೂ ಬಾಕಿ ಪಾವತಿಗೆ ಕ್ರಮ: ಸಿ ಎಂ, ಡಿ.ಕೆ. ಶಿವಕುಮಾರ

ಬೆಂಗಳೂರು: ರಾಜ್ಯದ ರೈತರ ಹಿತರಕ್ಷಣೆ ಮತ್ತು ಆರ್ಥಿಕ ಭದ್ರತೆಯೇ ರಾಜ್ಯ ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು, ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ 2025–26ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ರಾಗಿ, ಜೋಳ ಮತ್ತು ಭತ್ತ ಸೇರಿದಂತೆ ಒಟ್ಟು 7.96 ಲಕ್ಷ ಮೆಟ್ರಿಕ್ ಟನ್ ಧಾನ್ಯವನ್ನು ಸುಮಾರು 2.89 ಲಕ್ಷ ರೈತರಿಂದ ಖರೀದಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ವಿವಿಧ ವರ್ಷಗಳ ಕ್ಲೈಮ್‌ಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ…

Read More

ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಿಎಂ ಕರೆ: ಮಾದಕ ವಸ್ತುಗಳ ಬಗ್ಗೆ ಮಾಹಿತಿ ನೀಡಿದವರಿಗೆ ವಿಶೇಷ ಬಹುಮಾನ

ಬೆಂಗಳೂರು: ಮಾದಕ ವಸ್ತುಗಳ ಜಾಲವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು, ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಣೆ ಕುರಿತು ಗುಪ್ತ ಮಾಹಿತಿ ನೀಡುವ ಸಾರ್ವಜನಿಕರು ಮತ್ತು ಪೋಷಕರಿಗೆ ಪೊಲೀಸ್ ಇಲಾಖೆಯಿಂದ ಬಹುಮಾನ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳಸಾಗಾಣಿಕೆ ವಿರೋಧಿ ದಿನ–2026’ ಕಾರ್ಯಕ್ರಮವನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಉದ್ಘಾಟಿಸಿ ಅವರು ಮಾತನಾಡಿದರು….

Read More

ಗೃಹಲಕ್ಷ್ಮಿ ಯೋಜನೆಯಲ್ಲಿ ಕೋಟಿ ಕೋಟಿ ವ್ಯವಹಾರಗಳ ಗೊಂದಲ: ಖಾತೆಗಳೇ ಇಲ್ಲದ 23 ಸಾವಿರಕ್ಕೂ ಹೆಚ್ಚು ಮಂದಿಗೆ ₹46.52 ಕೋಟಿ ವರ್ಗಾವಣೆ?

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಹಲವು ಗಂಭೀರ ಲೋಪಗಳು ಬೆಳಕಿಗೆ ಬಂದಿದ್ದು, ಬ್ಯಾಂಕ್ ಖಾತೆ ಸಂಖ್ಯೆಗಳೇ ಇಲ್ಲದ 23,262 ಫಲಾನುಭವಿಗಳ ಹೆಸರಿಗೆ ₹46.52 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ ಎಂಬ ಅಂಶ ಮಹಾಲೆಕ್ಕಪರಿಶೋಧಕರ (ಸಿಎಜಿ) ಪರಿಶೀಲನೆಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಸಿಎಜಿ ನಡೆಸಿದ ಆಡಿಟ್‌ನಲ್ಲಿ ಯೋಜನೆಗೆ ಸಂಬಂಧಿಸಿದ ಬ್ಯಾಂಕ್ ಖಾತೆ ಮತ್ತು ಫಲಾನುಭವಿಗಳ ಮಾಹಿತಿಯಲ್ಲಿ ಹಲವಾರು ಅಸಂಗತತೆಗಳು ಕಂಡುಬಂದಿವೆ. ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (ಡಿಬಿಟಿ) ವ್ಯವಸ್ಥೆಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ…

Read More

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಜಯ: 11 ಅಡ್ಡ ಮತಗಳ ಸೆಳೆತ, ಜೆಡಿಎಸ್ ಅಭ್ಯರ್ಥಿಗೆ ಸೋಲು

ಬೆಂಗಳೂರು: ರಾಜ್ಯದ 7 ವಿಧಾನ ಪರಿಷತ್ ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದು ಭರ್ಜರಿ ಸಾಧನೆ ಮಾಡಿದ್ದು, ಬಿಜೆಪಿ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಸೋಲು ಅನುಭವಿಸಿದ್ದಾರೆ. ಇದೇ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷಗಳಿಂದ ಒಟ್ಟು 11 ಶಾಸಕರು ಅಡ್ಡ ಮತದಾನ ಮಾಡಿರುವ ಮಾಹಿತಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಈ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿತ್ತು. ಅದರ…

Read More

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಸಂಚಲನ: ಸಾಮೂಹಿಕ ರಾಜೀನಾಮೆಗೆ ಕಾರ್ಯಕರ್ತರ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿದ್ದು, ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿರುವುದು ಪಕ್ಷದೊಳಗೆ ಹೊಸ ಆತಂಕಕ್ಕೆ ಕಾರಣವಾಗಿದೆ. ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಸಾಮೂಹಿಕ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ರಾಮಲಿಂಗಾ ರೆಡ್ಡಿ ಅವರಿಗೆ ಪಕ್ಷದಲ್ಲಿ ಅವರ ಹಿರಿತನ ಮತ್ತು ಸೇವೆಯನ್ನು ಪರಿಗಣಿಸಿ ಸೂಕ್ತ ಜವಾಬ್ದಾರಿ ನೀಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಆರೋಪಿಸಿರುವ ಬೆಂಬಲಿಗರು, ಈ…

Read More

ಡಿ.ಕೆ. ಶಿವಕುಮಾರ್ ಇಂದು ಮುಖ್ಯಮಂತ್ರಿ ಪ್ರಮಾಣವಚನ; ಜಿ. ಪರಮೇಶ್ವರ್ ಏಕೈಕ ಉಪಮುಖ್ಯಮಂತ್ರಿ

ದೆಹಲಿ/ಬೆಂಗಳೂರು: ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರು ಇಂದು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಜೆ 4:05 ಗಂಟೆಗೆ ಬೆಂಗಳೂರಿನ ರಾಜಭವನದ ಗ್ಲಾಸ್ ಹೌಸ್‌ನಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದು, ಈ ಕಾರ್ಯಕ್ರಮದತ್ತ ರಾಜ್ಯದ ರಾಜಕೀಯ ವಲಯದ ಗಮನ ಕೇಂದ್ರೀಕೃತವಾಗಿದೆ. ಇದೇ ವೇಳೆ ನೂತನ ಸಚಿವ ಸಂಪುಟದ ರಚನೆ ಕುರಿತ ಕುತೂಹಲವೂ ತಾರಕಕ್ಕೇರಿದೆ. ದೆಹಲಿಯ ಉನ್ನತ ಮೂಲಗಳಿಂದ ಲಭ್ಯವಾದ ಮಾಹಿತಿಯ ಪ್ರಕಾರ, ಹಿರಿಯ ಕಾಂಗ್ರೆಸ್ ನಾಯಕ ಜಿ….

Read More

ಸರ್ಕಾರ ರಚಿಸಲು ಡಿ.ಕೆ. ಶಿವಕುಮಾರ್‌ಗೆ ರಾಜ್ಯಪಾಲರ ಆಹ್ವಾನ, ಜೂನ್ 3ಕ್ಕೆ ಪ್ರಮಾಣವಚನ

ಬೆಂಗಳೂರು: ಕರ್ನಾಟಕ ರಾಜಕೀಯದ ಬಹುದೊಡ್ಡ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಈಗ ಅಂತಿಮ ಹಂತಕ್ಕೆ ತಲುಪಿದ್ದು, ನೂತನ ಸರ್ಕಾರ ರಚಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಶಾಸಕಾಂಗ ಪಕ್ಷದ ನಾಯಕನಾಗಿ ಸರ್ವಾನುಮತದಿಂದ ಆಯ್ಕೆಯಾದ ಬೆನ್ನಲ್ಲೇ, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ತಮಗೆ ಬೆಂಬಲವಿರುವ ಅರ್ಹ ಶಾಸಕರ ಸಹಿ ಮತ್ತು ವಿವರಗಳ ಪಟ್ಟಿಯನ್ನು…

Read More

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ಭಾವನಾತ್ಮಕ ವಿದಾಯ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಅತ್ಯಂತ ಪ್ರಮುಖ ಹಾಗೂ ಮಹತ್ವದ ಬೆಳವಣಿಗೆಗಳು ನಡೆದಿವೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಇಂದು ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ ಅವರು, ರಾಜ್ಯಪಾಲರು ಊರಿನಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ರಾಜೀನಾಮೆ ಪತ್ರ ಸಲ್ಲಿಸಿದ ಬೆನ್ನಲ್ಲೇ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಅತ್ಯಂತ ಭಾವುಕರಾಗಿ…

Read More