ಒಲಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಕ್ರೀಡಾಪಟುಗಳಿಗೆ 6 ಕೋಟಿ ರೂ. ಬಹುಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: “ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದ್ದು, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ಬೃಹತ್ ನಗದು ಬಹುಮಾನ ನೀಡಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ವತಿಯಿಂದ ರಾಜಭವನದಲ್ಲಿ ಆಯೋಜಿಸಲಾಗಿದ್ದ ‘ಕರ್ನಾಟಕ ಒಲಂಪಿಕ್ 2025’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕ್ರೀಡಾ ಸಾಧಕರಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡುತ್ತಿದ್ದರು. ಚಿನ್ನದ ಪದಕಕ್ಕೆ 6 ಕೋಟಿ ರೂ.ಗಳಲ್ಲದೆ, ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂ….

Read More

ದ್ವೇಷ ಭಾಷಣಕ್ಕೆ ಬ್ರೇಕ್: ಐತಿಹಾಸಿಕ ‘ಕರ್ನಾಟಕ ದ್ವೇಷ ಭಾಷಣ ಪ್ರತಿಬಂಧಕ ವಿದೇಯಕ’ಕ್ಕೆ ವಿಧಾನಸಭೆ ಅಂಗೀಕಾರ

​ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಕದಡುವ ಹಾಗೂ ದ್ವೇಷ ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳಿಗೆ ಬಿಸಿ ಮುಟ್ಟಿಸುವ ಉದ್ದೇಶದ “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿದೇಯಕ-2025″ಕ್ಕೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ದೊರೆಯಿತು. ಈ ಮೂಲಕ ದ್ವೇಷ ಭಾಷಣ ತಡೆಗೆ ಪ್ರತ್ಯೇಕ ಕಾನೂನು ರೂಪಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ​ವಿದೇಯಕದ ಕುರಿತು ಸದನದಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು, “ಇತ್ತೀಚಿನ ದಿನಗಳಲ್ಲಿ ಸಮಾಜಕ್ಕೆ ನೋವಾಗುವ…

Read More

ನಾಲ್ಕೂವರೆ ವರ್ಷಗಳ ಬಳಿಕ ಜಿ.ಪಂ-ತಾ.ಪಂ ಚುನಾವಣೆಗೆ ಮುಹೂರ್ತ ಫಿಕ್ಸ್: ಗರಿಗೆದರಿದ ಹಳ್ಳಿ ರಾಜಕೀಯ!

​ ಬೆಂಗಳೂರು: ಕಳೆದ ನಾಲ್ಕೂವರೆ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕರ್ನಾಟಕದ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ (ZP and TP Elections) ಚುನಾವಣೆಗಳನ್ನು ನಡೆಸಲು ರಾಜ್ಯ ಸರ್ಕಾರವು ಕೊನೆಗೂ ಮಹತ್ವದ ನಿರ್ಧಾರ ಕೈಗೊಂಡಿದೆ. ಚುನಾವಣೆಗೆ ಹಸಿರು ನಿಶಾನೆ ತೋರಿಸಿರುವ ಸಚಿವ ಸಂಪುಟವು, 2026ರ ಏಪ್ರಿಲ್ ತಿಂಗಳಿನಲ್ಲಿ ಈ ಚುನಾವಣೆಗಳನ್ನು ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸಂಪೂರ್ಣ ಸಹಕಾರ ನೀಡಲು ತೀರ್ಮಾನಿಸಿದೆ. ​ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ…

Read More

ದೇಶದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು: ದೇಶದ ಅತ್ಯಂತ ಹಿರಿಯ ಶಾಸಕ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ (95) ಅವರು ವಯೋಸಹಜ ಅನಾರೋಗ್ಯದ ಕಾರಣ ಭಾನುವಾರ (ಡಿಸೆಂಬರ್ 14, 2025) ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ​ಕಳೆದ ಸುಮಾರು ಒಂದು ತಿಂಗಳಿನಿಂದ ಉಸಿರಾಟದ ತೊಂದರೆ ಮತ್ತು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿಗೆ ತಜ್ಞ ವೈದ್ಯರ ತಂಡವು ಚಿಕಿತ್ಸೆ ನೀಡುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು…

Read More

25 ಕೋಟಿ ಮೌಲ್ಯದ KIADB ಜಮೀನು ಲಪಟಾಯಿಸಲು ಯತ್ನ: ಹೆಡ್ ಕಾನ್‌ಸ್ಟೇಬಲ್ ವಿರುದ್ಧ ಎಫ್‌ಐಆರ್ ದಾಖಲು!

ನೆಲಮಂಗಲ, ಡಿ. 14: ಕಾನೂನು ರಕ್ಷಕನೇ ಭಕ್ಷಕನಾಗಲು ಯತ್ನಿಸಿದ ಗಂಭೀರ ಆರೋಪವೊಂದು ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ. ಕೋಟಿ ಕೋಟಿ ಬೆಲೆ ಬಾಳುವ ಜಮೀನಿನ ಮೇಲೆ ಕೆಂಗೆಣ್ಣು ಹಾಕಿದ ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಗಿರಿಜೇಶ್ ಮತ್ತು ಆತನ ತಂಡದವರು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಲ ಮಾಲೀಕರಿಗೆ ತಿಳಿಯದಂತೆ ಬರೋಬ್ಬರಿ 25 ಕೋಟಿ ರೂಪಾಯಿ ಮೌಲ್ಯದ 8 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ​ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ…

Read More

ರಾಜ್ಯ ಸರ್ಕಾರಿ ಮಹಿಳಾ ನೌಕರರ ಶ್ರಮದಾನಕ್ಕೆ ಸರ್ಕಾರದ ಗೌರವ: ಮುಖ್ಯಮಂತ್ರಿಗಳಿಂದ ಹಲವು ಪ್ರಮುಖ ಘೋಷಣೆಗಳು

ಬೆಂಗಳೂರು: ​ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರದಂದು (ಡಿಸೆಂಬರ್ 4) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಮಹಿಳಾ ನೌಕರರ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಸರ್ಕಾರವು “ಮಹಿಳಾ ನೌಕರರಿಗಾಗಿ ಋತುಚಕ್ರ ರಜೆ” ಘೋಷಿಸಿರುವ ಐತಿಹಾಸಿಕ ಕ್ರಮಕ್ಕಾಗಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿಗಳಿಗೆ ಸನ್ಮಾನಿಸಲಾಯಿತು. ​ಪ್ರಮುಖ ಘೋಷಣೆಗಳು ಮತ್ತು ಸರ್ಕಾರದ ಬದ್ಧತೆ ​ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಹಿಳಾ ನೌಕರರ ಹಿತದೃಷ್ಟಿಯಿಂದ ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದರು: ​ಸರ್ಕಾರದ ಆಡಳಿತ ಯಂತ್ರದಲ್ಲಿ…

Read More

ಬೆಳಗಾವಿ ಅಧಿವೇಶನ 20 ದಿನ ನಡೆಯಲಿ: ಬಿಜೆಪಿ-ಜೆಡಿಎಸ್‌ ಸಮನ್ವಯ ಸಭೆಯಲ್ಲಿ ಆರ್. ಅಶೋಕ್ ಆಗ್ರಹ; ಸರ್ಕಾರದ ವಿರುದ್ಧ ಶೇ. 60 ಕಮಿಷನ್ ಆರೋಪ

ಬೆಂಗಳೂರ:ರಾಜ್ಯದಲ್ಲಿ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟಗಳ ಸಮನ್ವಯ ಸಭೆಯು ಶನಿವಾರದಂದು ಬೆಂಗಳೂರಿನ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ನಡೆಯಿತು. ಸಭೆಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನ ಕೇವಲ ಕಾಟಾಚಾರಕ್ಕೆ ಮಾತ್ರ ಸೀಮಿತವಾಗಿದೆ. ಅದು 8 ದಿನಕ್ಕಿಂತ ಹೆಚ್ಚು ಕಾಲ ನಡೆಯಲಾರದು ಎಂದು ಟೀಕಿಸಿದರು. ​ಹಾಲಿ ಶಾಸಕರು ಮೃತಪಟ್ಟ ಕಾರಣ ಒಂದು ದಿನ ಅಧಿವೇಶನ…

Read More

“ಬ್ರೇಕ್‌ಫಾಸ್ಟ್ ಶೃಂಗಸಭೆ ಕದನ ವಿರಾಮವಷ್ಟೇ”: ಸಿಎಂ-ಡಿಸಿಎಂ ಸಭೆ ಕುರಿತು ಆರ್. ಅಶೋಕ ತೀವ್ರ ವಾಗ್ದಾಳಿ

ಬೆಂಗಳೂರ:ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಡುವಿನ ಬಹು ನಿರೀಕ್ಷಿತ ‘ಬೆಳಗಿನ ಉಪಾಹಾರ ಶೃಂಗಸಭೆ’ಯ ಕುರಿತು ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ ಅವರು ತಮ್ಮ ಎಕ್ಸ್ ಖಾತೆಯ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಶೋಕ ಅವರ ಪ್ರಕಾರ, ಈ ಸಭೆಯನ್ನು “ಬ್ರೇಕ್‌ಫಾಸ್ಟ್ ಮೀಟಿಂಗ್” ಎಂದು ಕರೆಯುವುದು ಕೇವಲ ಔದಾರ್ಯ. ನಿಜ ಹೇಳಬೇಕೆಂದರೆ, ಇದು ದಿನಬೆಳಗಾದರೆ ಒಬ್ಬರ ಮೇಲೊಬ್ಬರು ಹೊಂಚು ಹಾಕಿ, ಕತ್ತಿ ಮಸಿಯುವ ಯುದ್ಧ ನಿರತ ಎರಡು ಬಣಗಳ ಕಮಾಂಡರ್‌ಗಳ ನಡುವಿನ “ಕದನ…

Read More

ಗೊಂದಲಗಳಿಗೆ ತೆರೆ; ‘ಒಂದಾಗಿ ಮುನ್ನಡೆಯುತ್ತೇವೆ’: ಉಪಮುಖ್ಯಮಂತ್ರಿ ಜೊತೆ ಉಪಹಾರದ ನಂತರ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

​ಬೆಂಗಳೂರ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರದಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉಪಹಾರ ಸೇವಿಸಿ ಚರ್ಚೆ ನಡೆಸಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಸರ್ಕಾರ ಮತ್ತು ಪಕ್ಷದೊಳಗೆ ಉಂಟಾಗಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪಕ್ಷದ ವರಿಷ್ಠರ ಸೂಚನೆ ಮತ್ತು ತೀರ್ಮಾನದಂತೆ ತಾವು ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ನಡೆದುಕೊಳ್ಳಲು ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು. ಸಚಿವರು, ಶಾಸಕರು ಸೇರಿದಂತೆ ಯಾರೊಬ್ಬರೂ ಸರ್ಕಾರದ ವಿರುದ್ಧ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ​ಅಧಿವೇಶನ ಇರುವ ಹಿನ್ನೆಲೆಯಲ್ಲಿ ಯಾವುದೇ ಗೊಂದಲಗಳಿಲ್ಲದಂತೆ ನೋಡಿಕೊಳ್ಳಲು…

Read More

ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ನಿಲ್ಲಿ: ಡಿಸ್ಟಿಲರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರ:ಮೆಕ್ಕೆಜೋಳ ಖರೀದಿ ಮತ್ತು ಎಥೆನಾಲ್ ನಿರ್ವಹಣೆಗೆ ಸಂಬಂಧಿಸಿದಂತೆ (ಶುಕ್ರವಾರ) ವಿಧಾನಸೌಧದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದ ಡಿಸ್ಟಿಲರಿಗಳು ರೈತರ ಹಿತ ಕಾಯುವ ನಿಟ್ಟಿನಲ್ಲಿ ಕೂಡಲೇ ಮೆಕ್ಕೆಜೋಳ ಖರೀದಿಗೆ ಮುಂದಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ​ಕೇಂದ್ರ ಸರ್ಕಾರ ನಿಗದಿಪಡಿಸಿರುವ ಎಥೆನಾಲ್ ಕೋಟಾಗೆ ಅನುಗುಣವಾಗಿ ಯಾವ ಡಿಸ್ಟಿಲರಿಗಳು ಎಷ್ಟು ಮೆಕ್ಕೆಜೋಳ ಖರೀದಿಸಬೇಕು ಎಂಬ ಬಗ್ಗೆ ಕೃಷಿ ಮಾರುಕಟ್ಟೆ ಇಲಾಖೆ ಈಗಾಗಲೇ ನಿರ್ದೇಶನಗಳನ್ನು ನೀಡಿದೆ. ಇದರ ಪ್ರಕಾರ ಡಿಸ್ಟಿಲರಿಗಳು ಮೆಕ್ಕೆಜೋಳ ಖರೀದಿಸಿ ರೈತರ ನೆರವಿಗೆ ಬರಬೇಕು….

Read More