ರಾಜ್ಯಾದ್ಯಂತ ಪಿಯುಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಸಂಭ್ರಮ: ಅಕ್ರಮ ತಡೆಗೆ ಪೊಲೀಸ್ ಇಲಾಖೆಯ ‘ಹದ್ದಿನ ಕಣ್ಣು’
ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಹಾಗೂ ತದನಂತರ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ಮತ್ತು ನಿಷ್ಪಕ್ಷಪಾತವಾಗಿ ನಡೆಸಲು ಪೊಲೀಸ್ ಇಲಾಖೆ ಸರ್ವಸನ್ನದ್ಧವಾಗಿದೆ. ನಾಳೆಯಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜರುಗಲಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಅಥವಾ ಅಕ್ರಮಗಳು ನಡೆಯದಂತೆ ಇಲಾಖೆಯು ರಾಜ್ಯಾದ್ಯಂತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಶಾಂತಿ ಕಾಪಾಡಲು ಮತ್ತು ಅನಧಿಕೃತ ವ್ಯಕ್ತಿಗಳ ಸಂಚಾರವನ್ನು…

