ಮುಖ್ಯಮಂತ್ರಿ ಆಪ್ತ, ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ನಿಧನ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
📰 ಮುಖ್ಯಮಂತ್ರಿ ಆಪ್ತ, ಬಾಗಲಕೋಟೆ ಶಾಸಕ ಎಚ್.ವೈ. ಮೇಟಿ ನಿಧನ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೂ ಆಗಿದ್ದ ಮಾಜಿ ಸಚಿವ ಹಾಗೂ ಹಾಲಿ ಬಾಗಲಕೋಟೆ ಶಾಸಕ ಎಚ್.ವೈ. ಮೇಟಿ (ಹುಲ್ಲಪ್ಪ ಯಮನಪ್ಪ ಮೇಟಿ) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸ್ತಂಭನದಿಂದ ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಸೋಂಕು ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿ…

