ಕೇಂದ್ರ ಸಚಿವ ವಿ. ಸೋಮಣ್ಣ ಮೇಲೆ ಹಲ್ಲೆ ಯತ್ನ: ಡಿಜಿಪಿ ಕಚೇರಿ ಮೆಟ್ಟಿಲೇರಿ ಡಿಜಿಪಿಗೆ ಮನವಿ ನೀಡಿದ ಕೊಪ್ಪಳ ಬಿಜೆಪಿ ನಿಯೋಗ
ಬೆಂಗಳೂರು: ಕೊಪ್ಪಳ ಜಿಲ್ಲೆಯ ಹಿಟ್ನಾಳ್ ಗ್ರಾಮದಲ್ಲಿ ಇತ್ತೀಚೆಗೆ ನಡೆದ ರೈಲ್ವೆ ಮೇಲ್ಸೇತುವೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಮೇಲೆ ನಡೆದ ಹಲ್ಲೆ ಯತ್ನವನ್ನು ಖಂಡಿಸಿ, ಕೊಪ್ಪಳ ಜಿಲ್ಲಾ ಬಿಜೆಪಿ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DGP) ಅಧಿಕೃತ ದೂರು ಸಲ್ಲಿಸಿದೆ. ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಬಸವರಾಜ ದಡೇಸೂಗೂರು ಅವರ ನೇತೃತ್ವದ ನಿಯೋಗವು ಗುರುವಾರ ಬೆಂಗಳೂರಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಈ ಮನವಿ ಸಲ್ಲಿಸಿತು. ದೂರಿನ ಸಾರಾಂಶದಂತೆ, ಕಳೆದ…

