‘ಸುರಂಗ ರಸ್ತೆ ಕೇವಲ ದೋಚುವ ತಂತ್ರ’: ರುದ್ರಭೂಮಿ ಕಾರ್ಮಿಕರಿಗೆ ಸಂಬಳ ಕೊಡಲಾಗದ ಸರ್ಕಾರದಿಂದ ಸಾವಿರಾರು ಕೋಟಿ ಯೋಜನೆ ಏಕೆ? – ಛಲವಾದಿ ನಾರಾಯಣಸ್ವಾಮಿ ಕಿಡಿ

ಬೆಂಗಳೂರು: ನಗರದಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಸುರಂಗ ಮಾರ್ಗ (ಟನೆಲ್ ರೋಡ್) ಮಾಡುವ ಮಾತುಗಳ ಬಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಯೋಜನೆ ಕೇವಲ ‘ದೋಚುವ ತಂತ್ರ’ ಅಷ್ಟೇ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸುರಂಗ ಮಾರ್ಗ ಆಮೇಲೆ ಮಾಡೋಣ. ಆದರೆ, ರುದ್ರಭೂಮಿಯಲ್ಲಿ ಕೆಲಸ ಮಾಡುವ 147 ಜನ ಕಾರ್ಮಿಕರಿಗೆ ಸಂಬಳ ಕೊಡೋ ಯೋಗ್ಯತೆ ಈ ಕಾಂಗ್ರೆಸ್ ಸರ್ಕಾರಕ್ಕೆ ಇದೆಯೇ ಇಲ್ಲವೇ?” ಎಂದು ನೇರವಾಗಿ ಪ್ರಶ್ನಿಸಿದರು….

Read More

ಮೆಟ್ರೋ ದರ ಇಳಿಸಿ; ಸುರಂಗ ರಸ್ತೆ ನಿಲ್ಲಿಸಿ: ಕಾಂಗ್ರೆಸ್ ಯೋಜನೆಯಿಂದ ಸಾರ್ವಜನಿಕರ ದುಡ್ಡು ಪೋಲು – ತೇಜಸ್ವಿ ಸೂರ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಪ್ರಸ್ತಾಪಿಸಿರುವ ಟನೆಲ್ ರಸ್ತೆಯ ಯೋಜನೆಯು ‘ಸಾಮಾಜಿಕ ಪಿಡುಗು ನಿವಾರಣೆಗೆ ಇರುವ ₹43 ಸಾವಿರ ಕೋಟಿ’ಯ ಯೋಜನೆ ಎಂದು ಟೀಕಿಸಿದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು, ಬೆಂಗಳೂರಿನ ಸಾರಿಗೆ ಸಮಸ್ಯೆ ಪರಿಹಾರಕ್ಕೆ ಮೆಟ್ರೋ ದರಗಳನ್ನು ಆದಷ್ಟು ಬೇಗ ಇಳಿಸಿ, ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡುವಂತೆ ಒತ್ತಾಯಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸ 18 ಕಿ.ಮೀ….

Read More

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಅನುಷ್ಠಾನ: ಯಾವುದೇ ಜಾತಿಗೆ ಅನ್ಯಾಯವಾಗದಂತೆ ರೋಸ್ಟರ್ ಜಾರಿಗೆ ಕ್ರಮ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿಗಳ (SC) ಒಳ ಮೀಸಲಾತಿಯ ಅನುಷ್ಠಾನಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುದುವಾರದಂದು ವಿಧಾನಸೌಧದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುದೀರ್ಘವಾಗಿ ಚರ್ಚಿಸಿದರು. ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ರೋಸ್ಟರ್‌ನಲ್ಲಿ ಯಾವುದೇ ಜಾತಿಗೆ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ನೇಮಕಾತಿ…

Read More

ಕಾಗಿನೆಲೆ ಅಭಿವೃದ್ಧಿಗೆ ₹34 ಕೋಟಿ ಕ್ರಿಯಾ ಯೋಜನೆಗೆ ಮಂಜೂರಾತಿ: ವರ್ಷಕ್ಕೊಮ್ಮೆ ಕನಕ ಉತ್ಸವ ಆಚರಣೆಗೆ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಬುಧವಾರದಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು ₹34 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಸಭೆಯ ಪ್ರಮುಖ ನಿರ್ಧಾರಗಳ ಪ್ರಕಾರ, ಇನ್ನು ಮುಂದೆ ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಈ ಉತ್ಸವದ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅಲ್ಲದೆ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನಕ ಅಧ್ಯಯನ ಪೀಠದ…

Read More

ರಾಜ್ಯ ಹೈಕೋರ್ಟ್ ತೀರ್ಪಿನಿಂದ ಸರ್ಕಾರಕ್ಕೆ ಹಿನ್ನಡೆ, ಷಡ್ಯಂತ್ರಕ್ಕೆ ತಡೆ: ಬಿ.ವೈ. ವಿಜಯೇಂದ್ರರೈತರ ಪಾಲಿಗೆ ಸರ್ಕಾರ ಬದುಕಿದ್ದೂ ಸತ್ತಂತೆ: ಬಿಜೆಪಿ ರಾಜ್ಯಾಧ್ಯಕ್ಷರ ಟೀಕೆ

ಬೆಂಗಳೂರು: ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪಿನಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಅವರ ಕುತಂತ್ರ ಮತ್ತು ಷಡ್ಯಂತ್ರಗಳಿಗೆ ತಡೆ ಬಿದ್ದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ರೈತರಿಗೆ ಪರಿಹಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. “ರೈತರು ತೀವ್ರ ಸಂಕಷ್ಟದಲ್ಲಿದ್ದರೂ ರಾಜ್ಯ ಸರ್ಕಾರದಿಂದ ಯಾವುದೇ ಅನುಕೂಲ ಸಿಗುತ್ತಿಲ್ಲ. ಪರಿಹಾರ ನೀಡುವ ಬದಲು ಕೇಂದ್ರ ಸರ್ಕಾರದ…

Read More

ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ಹೊಸ ‘ಪೀಕ್‌ ಕ್ಯಾಪ್’ ಮುಕುಟ: 4 ದಶಕಗಳ ಬೇಡಿಕೆ ಈಡೇರಿಕೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಿಬ್ಬಂದಿಯ ಬಹುದಿನಗಳ ಬೇಡಿಕೆಯಾಗಿದ್ದ ಹೊಸ ‘ಪೀಕ್ ಕ್ಯಾಪ್’ ಅನ್ನು ಅಧಿಕೃತವಾಗಿ ವಿತರಿಸಲಾಗಿದ್ದು, ಹಳೆಯ ‘ಸ್ಲೋಚ್ ಹ್ಯಾಟ್’ಗೆ ವಿದಾಯ ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವರಾದ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಕುರಿತು ಮಾಹಿತಿ ನೀಡಿದರು. ನಗರದಲ್ಲಿ ಮಂಗಳವಾದಂದು ನಡೆದ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಮತ್ತು ‘ಸನ್ಮಿತ್ರ’ ಕೈಪಿಡಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ…

Read More

ಡ್ರಗ್ಸ್‌ ಮುಕ್ತ ಕರ್ನಾಟಕವೇ ನಮ್ಮ ಗುರಿ; ಪೊಲೀಸರು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕವನ್ನು ಸಂಪೂರ್ಣವಾಗಿ ಡ್ರಗ್ಸ್‌ ಮುಕ್ತ ರಾಜ್ಯವನ್ನಾಗಿ ಮಾಡುವುದು ಸರ್ಕಾರದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಮಂಗಳವಾರದಂದು (ಅಕ್ಟೋಬರ್ 28,) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಮತ್ತು ಸನ್ಮಿತ್ರ ಕಾರ್ಯಯೋಜನೆ ಕೈಪಿಡಿ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಯುವಶಕ್ತಿ ಮಾದಕ ವ್ಯಸನಕ್ಕೆ…

Read More

ಸ್ಪೀಕರ್ ಯು.ಟಿ. ಖಾದರ್ ಮೇಲಿನ ಆರೋಪಗಳ ನ್ಯಾಯಾಂಗ ತನಿಖೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್ ಹಾಗೂ ಹಾಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಹಾಲಿ ಸ್ಪೀಕರ್ ಯು.ಟಿ. ಖಾದರ್ ಅವರ ಅವಧಿಯಲ್ಲಿ ವಿಧಾನಸಭೆಯಲ್ಲಿ ನಡೆದಿರುವ ಟೆಂಡರ್ ಪ್ರಕ್ರಿಯೆ, ಖರೀದಿಗಳು ಮತ್ತು ವಿದೇಶ ಪ್ರವಾಸಗಳ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದು, ಈ ಎಲ್ಲಾ ವಿವಾದ, ಗೊಂದಲ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಕಾರ್ಯನಿರತ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಮಂಗಳವಾರದಂದು (ಅಕ್ಟೋಬರ್ 28) ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More

ಕೆಯುಡಬ್ಲ್ಯೂಜೆ ಚುನಾವಣೆ: 784 ಸ್ಥಾನಗಳಿಗೆ 1447 ನಾಮಪತ್ರ ಸಲ್ಲಿಕೆ

ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದ 2025-2028ನೇ ಸಾಲಿನ ರಾಜ್ಯ ಮತ್ತು ಜಿಲ್ಲಾ ಘಟಕಗಳ ಚುನಾವಣೆ ಪ್ರಕ್ರಿಯೆ ಚುರುಕುಗೊಂಡಿದ್ದು, ಒಟ್ಟು 784 ಸ್ಥಾನಗಳಿಗೆ ಬರೋಬ್ಬರಿ 1447 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಸಲು ಸೋಮವಾರ (ಅಕ್ಟೋಬರ್ 27) ಕೊನೆಯ ದಿನವಾಗಿದ್ದು, ಸ್ಪರ್ಧಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಚುನಾವಣಾ ಪ್ರಕಟಣೆಯ ಪ್ರಕಾರ, ಕೆಯುಡಬ್ಲ್ಯೂಜೆ ರಾಜ್ಯ ಘಟಕ ಹಾಗೂ 31 ಜಿಲ್ಲಾ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಕಾರ್ಯಕಾರಿ…

Read More

ಪಾಲಿಕೆ ಶಿಕ್ಷಕರಿಗೆ ವೇತನ ನೀಡಿ, ಸುರಂಗ ರಸ್ತೆ ಹಠ ಬಿಡಿ: ಡಿಸಿಎಂ ವಿರುದ್ಧ ಆರ್. ಅಶೋಕ ವಾಗ್ದಾಳಿ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಸುರಂಗ ರಸ್ತೆ ಯೋಜನೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕುರಿತು ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಶಿವಕುಮಾರ್ ಅವರು ಕನ್ನಡಿಗರಿಗೆ “ಚೊಂಬು ಕೊಟ್ಟಿದ್ದಾರೆ” ಎಂದು ಅಶೋಕ ಟೀಕಿಸಿದ್ದಾರೆ. ಸುರಂಗ ರಸ್ತೆ, ಸ್ಕೈ ಡೆಕ್, ಬ್ರ್ಯಾಂಡ್ ಬೆಂಗಳೂರು, ಜಿಬಿಎ (ಗ್ರೇಟರ್ ಬೆಂಗಳೂರು) ಯೋಜನೆಗಳ ಕುರಿತು ಮಾತನಾಡುತ್ತಾ, ಡಿಸಿಎಂ ಅವರು “ಬರೀ…

Read More