25 ಕೋಟಿ ಮೌಲ್ಯದ KIADB ಜಮೀನು ಲಪಟಾಯಿಸಲು ಯತ್ನ: ಹೆಡ್ ಕಾನ್‌ಸ್ಟೇಬಲ್ ವಿರುದ್ಧ ಎಫ್‌ಐಆರ್ ದಾಖಲು!
ನೆಲಮಂಗಲ, ಡಿ. 14: ಕಾನೂನು ರಕ್ಷಕನೇ ಭಕ್ಷಕನಾಗಲು ಯತ್ನಿಸಿದ ಗಂಭೀರ ಆರೋಪವೊಂದು ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ. ಕೋಟಿ ಕೋಟಿ ಬೆಲೆ ಬಾಳುವ ಜಮೀನಿನ ಮೇಲೆ ಕೆಂಗೆಣ್ಣು ಹಾಕಿದ ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಗಿರಿಜೇಶ್ ಮತ್ತು ಆತನ ತಂಡದವರು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂಲ ಮಾಲೀಕರಿಗೆ ತಿಳಿಯದಂತೆ ಬರೋಬ್ಬರಿ 25 ಕೋಟಿ ರೂಪಾಯಿ ಮೌಲ್ಯದ 8 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ…

