ಅತ್ಯಾಚಾರದ ಕರಾಳ ಕೃತ್ಯ: ಇನ್‌ಸ್ಪೆಕ್ಟರ್, ಎಎಸ್‌ಐ ಅಮಾನತು
ಬೆಂಗಳೂರ:ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ದೇವರಜೀವನಹಳ್ಳಿ (ಡಿಜೆ ಹಳ್ಳಿ) ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ಎಚ್.ಬಿ. ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ (ಎಎಸ್‌ಐ) ಪ್ರಕಾಶ್ ಅವರನ್ನು ನಗರ ಪೊಲೀಸ್ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರು ಸೋಮವಾರ ತಕ್ಷಣದಿಂದಲೇ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಖಾಕಿ ವೇಷದಲ್ಲಿದ್ದ ಈ ಇಬ್ಬರು ಅಧಿಕಾರಿಗಳ ವಿರುದ್ಧ ನಗರ ಮೂಲದ ಬ್ಯೂಟಿಷಿಯನ್ ಮಹಿಳೆಯೊಬ್ಬರು ಅತ್ಯಾಚಾರ, ಲೈಂಗಿಕ ದೌರ್ಜನ್ಯ ಮತ್ತು ವಂಚನೆಯ ಕುರಿತು ದೂರು ನೀಡಿದ್ದರು….

