ಧಾರವಾಡ ಜಿಲ್ಲೆಯಲ್ಲಿ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಬ್ಬ: 105 ಕೇಂದ್ರಗಳಲ್ಲಿ 29,568 ವಿದ್ಯಾರ್ಥಿಗಳಿಂದ ಪರೀಕ್ಷೆ
ಧಾರವಾಡ: ಜಿಲ್ಲೆಯಲ್ಲಿ 2026ರ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18 ರಿಂದ ಏಪ್ರಿಲ್ 02 ರವರೆಗೆ ಜರುಗಲಿದ್ದು, ಸುಗಮ ಹಾಗೂ ಪಾರದರ್ಶಕ ಪರೀಕ್ಷೆಗಾಗಿ ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜಿಲ್ಲೆಯ ಒಟ್ಟು 105 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 29,568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಇದರಲ್ಲಿ 26,171 ಹೊಸ ವಿದ್ಯಾರ್ಥಿಗಳು, 960 ಬಾಹ್ಯ ಅಭ್ಯರ್ಥಿಗಳು ಹಾಗೂ 2,437 ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷೆಗಳು ಪ್ರತಿದಿನ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 1:15 ಗಂಟೆಯವರೆಗೆ…

