ವಿಪತ್ತು ನಿರ್ವಹಣೆಯಲ್ಲಿ ತಂಡದ ಸಮನ್ವಯ ಮತ್ತು ಆಧುನಿಕ ಉಪಕರಣಗಳ ಬಳಕೆ ಅತ್ಯಗತ್ಯ: ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ

ಧಾರವಾಡ: ವಿಪತ್ತುಗಳು ಆಕಸ್ಮಿಕವಾಗಿ ಸಂಭವಿಸುವುದರಿಂದ ತಕ್ಷಣದ ಸ್ಪಂದನೆ ನೀಡಿ ಜನ-ಜಾನುವಾರುಗಳ ಪ್ರಾಣ ಹಾಗೂ ಆಸ್ತಿಪಾಸ್ತಿಯನ್ನು ರಕ್ಷಿಸಲು ವಿಪತ್ತು ನಿರ್ವಹಣಾ ಅಣುಕು ಪ್ರದರ್ಶನಗಳು ಅತ್ಯಂತ ಸಹಕಾರಿಯಾಗಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ಅಭಿಪ್ರಾಯಪಟ್ಟರು. ​ರಾಯಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಎಚ್‌ಪಿಸಿಎಲ್ ತೈಲ ಘಟಕದಲ್ಲಿ ಶುಕ್ರವಾರ ಜಿಲ್ಲಾಡಳಿತ, ಮೆ|| ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ಹಾಗೂ ವಿಜಯವಾಡದ ಎನ್‌ಡಿಆರ್‌ಎಫ್ ತಂಡದ ಸಂಯೋಗದಲ್ಲಿ ಆಯೋಜಿಸಲಾಗಿದ್ದ ‘ಗ್ಯಾಸ್ ಸೋರಿಕೆ ಅವಘಡ ತಡೆಗಟ್ಟುವ ಅಣುಕು…

Read More

ಕರ್ತವ್ಯದ ವೇಳೆ ಮೃತಪಟ್ಟ ಡಿಎಆರ್ ಪೊಲೀಸ್ ಸಿಬ್ಬಂದಿ ಕುಟುಂಬಕ್ಕೆ 70 ಲಕ್ಷ ರೂ. ಪರಿಹಾರ ಚೆಕ್ ಹಸ್ತಾಂತರ

ಧಾರವಾಡ: ಕರ್ತವ್ಯ ನಿಮಿತ್ತ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿ.ಎ.ಆರ್.) ಪೊಲೀಸ್ ಸಿಬ್ಬಂದಿ ದಿ. ಯಲ್ಲಪ್ಪ ಮಡಿವಾಳಪ್ಪ ಕುಂಬಾರ ಅವರ ಕುಟುಂಬಕ್ಕೆ ಪೊಲೀಸ್ ಸ್ಯಾಲರಿ ಪ್ಯಾಕೇಜ್ ಯೋಜನೆಯಡಿ 70 ಲಕ್ಷ ರೂಪಾಯಿಗಳ ವಿಮಾ ಮೊತ್ತದ ಚೆಕ್ಕನ್ನು ಶುಕ್ರವಾರ ಹಸ್ತಾಂತರಿಸಲಾಯಿತು. ​ನಗರದ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಪರೇಡ್ ಸಂದರ್ಭದಲ್ಲಿ ಮೃತರ ಕುಟುಂಬದವರಿಗೆ ಈ ಮೊತ್ತವನ್ನು ವಿತರಿಸಲಾಯಿತು. 2025ರ ಜೂನ್ 21ರಂದು ರಾತ್ರಿ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ…

Read More

ಮಲಪ್ರಭಾ ಕಾಲುವೆ ನೀರು ಬಿಡುಗಡೆ ಅವಧಿ ವಿಸ್ತರಿಸಲು ಒತ್ತಾಯ: ರೈತರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲು ದೇವರಾಜ ದಾಡಿಬಾವಿ ಮನವಿ

ನವಲಗುಂದ: ಈ ಭಾಗದ ರೈತರ ಪ್ರಮುಖ ಹಿಂಗಾರು ಬೆಳೆಗಳಾದ ಸೂರ್ಯಕಾಂತಿ ಮತ್ತು ಗೋಧಿ ಸದ್ಯ ಕಾಳು ಕಟ್ಟುವ ಹಂತದಲ್ಲಿದ್ದು, ಬೆಳೆಗಳ ರಕ್ಷಣೆಗಾಗಿ ಮಲಪ್ರಭಾ ಕಾಲುವೆಯ ನೀರು ಬಿಡುಗಡೆ ಅವಧಿಯನ್ನು ಇನ್ನೂ 15 ದಿನಗಳ ಕಾಲ ವಿಸ್ತರಿಸಬೇಕೆಂದು ಬಿಜೆಪಿ ಮುಖಂಡ ದೇವರಾಜ ದಾಡಿಬಾವಿ ಸರ್ಕಾರ ಹಾಗೂ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ​ಪ್ರಸ್ತುತ ಬೇಸಿಗೆಯ ತಾಪಮಾನ ಏರುತ್ತಿರುವುದರಿಂದ ಮತ್ತು ಮಳೆಯ ಯಾವುದೇ ಆಶ್ರಯ ಇಲ್ಲದ ಕಾರಣ, ರೈತರು ಸಂಪೂರ್ಣವಾಗಿ ಕಾಲುವೆ ನೀರನ್ನೇ ನಂಬಿದ್ದಾರೆ. ಆದರೆ, ಅಧಿಕಾರಿಗಳು ಫೆಬ್ರವರಿ 15ರವರೆಗೆ ಮಾತ್ರ ಕಾಲುವೆಗೆ…

Read More

ಸರ್ಕಾರಿ ಶಾಲೆಗಳ ಏಳ್ಗೆಗೆ ಸಮುದಾಯದ ಸಹಭಾಗಿತ್ವ ಅವಶ್ಯಕ: ಧಾರವಾಡದಲ್ಲಿ ರಾಮಕೃಷ್ಣ ಸದಲಗಿ ಅಭಿಪ್ರಾಯ

ಧಾರವಾಡ: ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆಯು ಹತ್ತು ಹಲವು ಸೌಲಭ್ಯಗಳನ್ನು ಜಾರಿಗೊಳಿಸುತ್ತಿದೆ. ಆದರೆ ಇಂತಹ ಸೌಲಭ್ಯಗಳು ಮತ್ತು ಶಾಲಾ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಲು ಸಮುದಾಯದ ಸಹಭಾಗಿತ್ವ ಅತ್ಯಂತ ಅವಶ್ಯಕ ಎಂದು ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಅಭಿಪ್ರಾಯಪಟ್ಟರು. ತಾಲೂಕಿನ ಮುರಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮುದಾಯ ಮತ್ತು ಶಿಕ್ಷಣ ಇಲಾಖೆ ಕೈಜೋಡಿಸಿದಾಗ ಮಾತ್ರ ಸರ್ಕಾರಿ ಶಾಲೆಗಳ…

Read More

ಸ್ವಾವಲಂಬಿ ಬದುಕಿಗೆ ಕೌಶಲ್ಯ ತರಬೇತಿ ಅಗತ್ಯ: ಅಣ್ಣಿಗೇರಿಯಲ್ಲಿ ಬ್ಯೂಟಿ ಪಾರ್ಲರ್ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

ಅಣ್ಣಿಗೇರಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನವಿದ್ದು, ಪ್ರತಿಯೊಬ್ಬ ಮಹಿಳೆಯು ಸರ್ಕಾರದ ವಿವಿಧ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಲು ಮುಂದಾಗಬೇಕು ಎಂದು ಅಣ್ಣಿಗೇರಿಯ ಆದಿಕವಿ ಪಂಪ ಕನ್ನಡ ಬಳಗದ ಅಧ್ಯಕ್ಷ ವೀರೇಶ್ ಎಸ್. ಕುಬಸದ ಕರೆ ನೀಡಿದರು. ಶೇಷಾದ್ರಿ ಗ್ರಾಮೀಣ ಮತ್ತು ನಗರ ಅಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರದ ಸಮಾರೋಪ ಹಾಗೂ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ​ಮಹಿಳೆಯರು ತಮಗೆ ಸಿಕ್ಕ…

Read More

ಧಾರವಾಡ: ಅಪಾಯಕಾರಿ ಸ್ಥಿತಿಯಲ್ಲಿರುವ 18 ಮರಗಳ ತೆರವಿಗೆ ಫೆ. 10 ರಂದು ಬಹಿರಂಗ ಹರಾಜು

ಧಾರವಾಡ: ನಗರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಚೇರಿಗಳ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರುವುಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. ಒಟ್ಟು 18 ಮರಗಳು ಹಾಗೂ 7 ಮರದ ಟೊಂಗೆಗಳನ್ನು ತೆರವುಗೊಳಿಸುವ ಸಂಬಂಧ ಫೆಬ್ರವರಿ 10 ರಂದು ಮಧ್ಯಾಹ್ನ 3 ಗಂಟೆಗೆ ಧಾರವಾಡದ ವಲಯ ಅರಣ್ಯ ಅಧಿಕಾರಿಗಳ ಕಚೇರಿಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ​ಮರ ಸಂರಕ್ಷಣಾ ಕಾಯ್ದೆ 1976 ರ ಅನ್ವಯ ಈ ಕ್ರಮ ಕೈಗೊಳ್ಳಲಾಗುತ್ತಿದ್ದು,…

Read More

ಧಾರವಾಡ ಜಿಲ್ಲೆಯಲ್ಲಿ ಬೆಂಬಲ ಬೆಲೆಯಡಿ 13,340 ಕ್ವಿಂಟಲ್ ಹೆಸರು ಖರೀದಿ: ರೈತರಿಗೆ 9.51 ಕೋಟಿ ರೂ. ಹಣ ಪಾವತಿ

ಧಾರವಾಡ: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ 13,340.50 ಕ್ವಿಂಟಲ್ ಹೆಸರು ಕಾಳು ಉತ್ಪನ್ನವನ್ನು ಖರೀದಿಸಲಾಗಿದ್ದು, ಈವರೆಗೆ 1,512 ರೈತರಿಗೆ ಒಟ್ಟು 9,51,85,408 ರೂಪಾಯಿಗಳನ್ನು ಡಿಬಿಟಿ ಮೂಲಕ ನೇರವಾಗಿ ಅವರ ಖಾತೆಗಳಿಗೆ ಪಾವತಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಇಲಾಖೆಯ ಉಪನಿರ್ದೇಶಕ ವಿ.ಎಮ್. ಲಮಾಣಿ ತಿಳಿಸಿದ್ದಾರೆ. ಬಾಕಿ ಇರುವ ಸುಮಾರು 210 ರೈತರಿಗೆ ಹಣ ಪಾವತಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಬರುವ ಶನಿವಾರದೊಳಗೆ ಬಾಕಿ ಮೊತ್ತ ಪಾವತಿಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಸಪ್ಟೆಂಬರ್…

Read More

ಗೃಹಲಕ್ಷ್ಮಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಶ್ಯಾನಪ್ಪಗೌಡ ಪಾಟೀಲ ಸೂಚನೆ

ಧಾರವಾಡ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಲಾಭವು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪುವಂತಾಗಬೇಕು ಹಾಗೂ ಗೃಹಲಕ್ಷ್ಮಿ ಯೋಜನೆಯಡಿ ಮೃತಪಟ್ಟ ಮತ್ತು ಸ್ಥಳಾಂತರಗೊಂಡ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ನಿರಂತರವಾಗಿ ಪರಿಷ್ಕರಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ಯಾನಪ್ಪಗೌಡ ಆರ್. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ​ಗೃಹಲಕ್ಷ್ಮಿ…

Read More

ಬಾಲ್ಯ ವಿವಾಹ ತಡೆಗೆ ಕಲ್ಯಾಣ ಮಂಟಪಗಳ ಮಾಲೀಕರು ಸಹಕರಿಸಿ: ಧಾರವಾಡದಲ್ಲಿ ತರಬೇತಿ ಕಾರ್ಯಾಗಾರ

ಧಾರವಾಡ: ಬಾಲ್ಯ ವಿವಾಹ ಮುಕ್ತ ಭಾರತವನ್ನು ರೂಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ 100 ದಿನಗಳ ಜನಜಾಗೃತಿ ಅಭಿಯಾನದ ಅಂಗವಾಗಿ ಜಿಲ್ಲೆಯ ಕಲ್ಯಾಣ ಮಂಟಪಗಳ ಮಾಲೀಕರು ಮತ್ತು ಸಂಘದ ಮುಖ್ಯಸ್ಥರಿಗಾಗಿ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು. ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಘಟಕಗಳ ಸಂಯುಕ್ತಾಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಬಿ.ವಾಯ್…

Read More

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ನವಲಗುಂದದಲ್ಲಿ ಅಕ್ಷರ ದಾಸೋಹ ನೌಕರರಿಂದ ಮನವಿ ಸಲ್ಲಿಕೆ

ನವಲಗುಂದ: ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಸೋಮವಾರ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ರಾಧಾ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು. ​ಬಿಸಿಯೂಟ ನೌಕರರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಈ ಮನವಿ ಸಲ್ಲಿಸಲಾಗಿದ್ದು, ಹಲವು ವರ್ಷಗಳಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ನೌಕರರು ಆಗ್ರಹಿಸಿದರು. ಒಂದು ವೇಳೆ ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದಿದ್ದಲ್ಲಿ, ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಗೆ ಓಗೊಟ್ಟು ಫೆಬ್ರವರಿ…

Read More