ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್: ಮೇ 3 ರಂದು ಧಾರವಾಡದಲ್ಲಿ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ
ಧಾರವಾಡ: ಮಹಾರಾಷ್ಟ್ರದ ಸಾತಾರಾದಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಹಿಂದ್ ಕೇಸರಿ’ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆಯನ್ನು ಮೇ 3 ರಂದು ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ (ಕೆ.ಸಿ.ಡಿ) ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಭಾರತೀಯ ಶೈಲಿ ಕುಸ್ತಿ ಸಂಘದ ಅಧ್ಯಕ್ಷ ರತನಕುಮಾರ ಮಠಪತಿ ತಿಳಿಸಿದರು. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 14 ರಿಂದ 17 ರವರೆಗೆ ಸಾತಾರಾದಲ್ಲಿ 52ನೇ ಪುರುಷರ ಹಾಗೂ 4ನೇ ಮಹಿಳಾ ‘ಹಿಂದ್ ಕೇಸರಿ’ ಮತ್ತು…

