ಧಾರವಾಡ: ಏಪ್ರಿಲ್ 23 ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳಿಗೆ ಕಾಲುಬಾಯಿ ಲಸಿಕಾ ಅಭಿಯಾನ
ಧಾರವಾಡ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲ ದನ ಹಾಗೂ ಎಮ್ಮೆಗಳಿಗೆ ಏಪ್ರಿಲ್ 23 ರಿಂದ ಮೇ 22 ರವರೆಗೆ ಒಂಬತ್ತನೇ ಸುತ್ತಿನ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮೇಲುಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಶುಪಾಲನಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ರೈತರ ಮನೆ ಬಾಗಿಲಿಗೆ ಬಂದು ಉಚಿತವಾಗಿ ಲಸಿಕೆ ಹಾಕಲಿದ್ದು, ಜಿಲ್ಲೆಯ…

