ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರ ಪರ ನಿಂತ ಸಚಿವ ಸಂತೋಷ ಲಾಡ್: ಬೇಡಿಕೆ ಈಡೇರಿಸುವ ಭರವಸೆ
ಧಾರವಾಡ: ವಿವಿಧ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೇಟಿ ನೀಡಿ, ಕಾರ್ಯಕರ್ತೆಯರ ಅಹವಾಲು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಆಶಾ ಕಾರ್ಯಕರ್ತೆಯರ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ಜನಸಂಖ್ಯೆ ತರ್ಕಬದ್ಧಗೊಳಿಸುವ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಸೇವೆಯಿಂದ ವಜಾಗೊಳಿಸುವ ಕ್ರಮವನ್ನು ಕೈಬಿಡಬೇಕು…

