ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಧಾರವಾಡ ತಾಲ್ಲೂಕು ಮುಂಚೂಣಿ: ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ಶ್ಲಾಘನೆ
ಧಾರವಾಡ: ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ಪ್ರತಿ ಅರ್ಹ ಫಲಾನುಭವಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಧಾರವಾಡ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅರವಿಂದ ಏಗನಗೌಡರ ಅವರು ಸೂಚನೆ ನೀಡಿದ್ದಾರೆ. ಇಂದು ಧಾರವಾಡದ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಅಡಿಯಲ್ಲಿ ಜಾರಿಯಾಗುತ್ತಿರುವ ಯೋಜನೆಗಳ ಸಮಗ್ರ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ…

