ಗುಡಿಸಾಗರ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸಾಂಸ್ಕೃತಿಕ ವೈಭವ
ನವಲಗುಂದ: ತಾಲೂಕಿನ ಗುಡಿಸಾಗರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಸರಸ್ವತಿ ಪೂಜೆ, 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿದವು. ಕಾರ್ಯಕ್ರಮದ ಆರಂಭದಲ್ಲಿ ಗಣ್ಯರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ನಂತರ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿದಾನಂದ ಮುತ್ತಣ್ಣವರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗುರುಲಿಂಗಯ್ಯ ಹಿರೇಮಠ್ ಆಗಮಿಸಿದ್ದರು. ರಜಪೂತ ಶಿಕ್ಷಕಿಯರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಡಿಎಂಸಿ ಸದಸ್ಯ…

