ಮತದಾರರ ಪಟ್ಟಿ ಪರಿಷ್ಕರಣೆ ಇಲ್ಲ; ಕೇವಲ ‘ಮ್ಯಾಪಿಂಗ್’ ಕಾರ್ಯ ಜಾರಿ: ಜಿಲ್ಲಾಧಿಕಾರಿ ದಿವ್ಯ ಪ್ರಭು ಸ್ಪಷ್ಟನೆ
ಧಾರವಾಡ: ಜಿಲ್ಲೆಯಲ್ಲಿ ಪ್ರಸ್ತುತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕಾರ್ಯ ನಡೆಯುತ್ತಿಲ್ಲ. ಹೀಗಾಗಿ, ಮತದಾರರ ಪಟ್ಟಿಯಿಂದ ಯಾವುದೇ ಹೆಸರುಗಳನ್ನು ತೆಗೆದುಹಾಕುವ ಅಥವಾ ಹೊಸದಾಗಿ ಸೇರ್ಪಡೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿಲ್ಲ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಭಾನುವಾರ (ಜ.12) ಸಂಜೆ ಮತದಾರರ ಪಟ್ಟಿ ಮ್ಯಾಪಿಂಗ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ, ಮುಂಬರುವ…

