ಫೆಬ್ರವರಿ 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಧಾರವಾಡ ಜಿಲ್ಲೆಯಲ್ಲಿ 26,954 ವಿದ್ಯಾರ್ಥಿಗಳು ಸಜ್ಜು
ಧಾರವಾಡ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಸುಗಮ ಮತ್ತು ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತವು ಸರ್ವಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಒಟ್ಟು 26,954 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 12,665 ಪುರುಷ ಹಾಗೂ 14,289 ಮಹಿಳಾ ವಿದ್ಯಾರ್ಥಿಗಳಿದ್ದಾರೆ. ವಿಭಾಗವಾರು ಮಾಹಿತಿ…

