ಧಾರವಾಡ:ಮರಳು ಲಾರಿ ಬಿಡಲು ₹30 ಸಾವಿರ ಲಂಚ ಆರೋಪ: ಹೆಡ್‌ಕಾನ್ಸ್‌ಟೇಬಲ್, ಹೋಮ್‌ಗಾರ್ಡ್ ಲೋಕಾಯುಕ್ತ ಬಲೆಗೆ
ಧಾರವಾಡ: ಮರಳು ಸಾಗಿಸುತ್ತಿದ್ದ ಲಾರಿಯನ್ನು ಹುಬ್ಬಳ್ಳಿ–ಧಾರವಾಡ ಅವಳಿ ನಗರ ವ್ಯಾಪ್ತಿಯಲ್ಲಿ ಯಾವುದೇ ತೊಂದರೆಯಿಲ್ಲದೆ ಸಂಚರಿಸಲು ಅವಕಾಶ ನೀಡಲು ಲಾರಿ ಚಾಲಕನಿಂದ ₹30 ಸಾವಿರ ಲಂಚ ಪಡೆದ ಆರೋಪದ ಮೇಲೆ ಪೊಲೀಸ್ ಹೆಡ್‌ಕಾನ್ಸ್‌ಟೇಬಲ್ ಹಾಗೂ ಹೋಮ್‌ಗಾರ್ಡ್‌ನನ್ನು ಧಾರವಾಡ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಧಾರವಾಡ ನಗರ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಹಸನ್‌ಸಾಬ ನದಾಫ್ ಹಾಗೂ ಹೋಮ್‌ಗಾರ್ಡ್ ಇಕ್ಸಾಲ್ ನದಾಫ್ ಆರೋಪಿಗಳೆಂದು ಗುರುತಿಸಲಾಗಿದೆ. ಕೊಪ್ಪಳ ಮೂಲದ ಲಾರಿ ಚಾಲಕ ಹನುಮಂತ ಅವರು…

