ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ಪ್ರವೇಶಾತಿ: ಜೂನ್ 7 ರಂದು ಪ್ರವೇಶ ಪರೀಕ್ಷೆ; ಅರ್ಜಿ ಆಹ್ವಾನ
ಧಾರವಾಡ: ಉತ್ತರಾಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ಪ್ರತಿಷ್ಠಿತ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ (RIMC) 2027ರ ಜನವರಿ ಅಧಿವೇಶನದ 8ನೇ ತರಗತಿ ಪ್ರವೇಶಕ್ಕಾಗಿ ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಾದ ಅರ್ಹತಾ ಪ್ರವೇಶ ಪರೀಕ್ಷೆಯು ಜೂನ್ 07, 2026ರ ಭಾನುವಾರದಂದು ಬೆಂಗಳೂರು ಕೇಂದ್ರದಲ್ಲಿ ಜರುಗಲಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ತಿಳಿಸಿದೆ. ಅರ್ಹತೆಗಳು: ಯಾವುದೇ ಸರ್ಕಾರಿ ಮಾನ್ಯತೆ ಪಡೆದ ಶಾಲೆಯಲ್ಲಿ ಸದ್ಯ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಥವಾ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು…

