ಅಂಚೆ ಕಚೇರಿ ಉಳಿತಾಯ ಯೋಜನೆಗಳಿಗೆ ಉತ್ತೇಜನ: ‘ಉಳಿತಾಯ ಸಂಕಲ್ಪ’ ಅಭಿಯಾನಕ್ಕೆ ಚಾಲನೆ
ಧಾರವಾಡ: ಸಾರ್ವಜನಿಕರಲ್ಲಿ ಉಳಿತಾಯದ ಮನೋಭಾವ ಬೆಳೆಸಲು ಹಾಗೂ ಸುರಕ್ಷಿತ ಹೂಡಿಕೆಗೆ ಅವಕಾಶ ಕಲ್ಪಿಸಲು ಭಾರತೀಯ ಅಂಚೆ ಇಲಾಖೆಯು ಇದೀಗ ‘ಉಳಿತಾಯ ಸಂಕಲ್ಪ’ ಅಭಿಯಾನವನ್ನು ಜಾರಿಗೊಳಿಸಿದೆ. ಭಾರತ ಸರ್ಕಾರದ ಭರವಸೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಅಂಚೆ ಕಚೇರಿ ಉಳಿತಾಯ ಬ್ಯಾಂಕ್ (POSB), ಗ್ರಾಹಕರಿಗೆ ಅತ್ಯಂತ ವಿಶ್ವಾಸಾರ್ಹ ಮತ್ತು ಲಾಭದಾಯಕ ಹೂಡಿಕೆ ಯೋಜನೆಗಳನ್ನು ಪರಿಚಯಿಸುತ್ತಿದ್ದು, ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ. ಅಂಚೆ ಕಚೇರಿಗಳ ವಿವಿಧ ಯೋಜನೆಗಳಲ್ಲಿ ಹೂಡಿಕೆ ಮಾಡುವುದರಿಂದ ಗ್ರಾಹಕರು ತಮ್ಮ ಹಣಕ್ಕೆ ಹೆಚ್ಚಿನ ಭದ್ರತೆಯೊಂದಿಗೆ ನಿಯಮಿತ ಬಡ್ಡಿ ಹಾಗೂ ನಿರಂತರ…

