ಕುಂದಗೋಳದಲ್ಲಿ ಡಿ. 25 ರಿಂದ ಸಂಸದರ ಕ್ರೀಡಾ ಮಹೋತ್ಸವ: ಶಾಸಕ ಎಂ.ಆರ್. ಪಾಟೀಲ್ ಮಾಹಿತಿ

ಕುಂದಗೋಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ಖೇಲೋ ಇಂಡಿಯಾ’ ಹಾಗೂ ‘ಫಿಟ್ ಇಂಡಿಯಾ’ ಅಭಿಯಾನದ ಆಶಯದಂತೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮಹತ್ವಾಕಾಂಕ್ಷೆಯ ‘ಧಾರವಾಡ ಸಂಸದ ಕ್ರೀಡಾ ಮಹೋತ್ಸವ 2025-26’ ಡಿಸೆಂಬರ್ 25 ಮತ್ತು 26 ರಂದು ಕುಂದಗೋಳ ಪಟ್ಟಣದಲ್ಲಿ ಅತ್ಯಂತ ವೈಭವದಿಂದ ಜರುಗಲಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಅಜಾತಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ…

Read More

ಪಶುಪತಿಹಾಳ ಗ್ರಾಮ ಪಂಚಾಯಿತಿಯಲ್ಲಿ ಆಡಳಿತ ದುರ್ವ್ಯವಸ್ಥೆ ಕರ್ತವ್ಯ ಲೋಪಕ್ಕೆ ಗ್ರಾಮಸ್ಥರ ತೀವ್ರ ಖಂಡನೆ

ಕುಂದಗೋಳ: ತಾಲೂಕಿನ ಪಶುಪತಿಹಾಳ ಗ್ರಾಮ ಪಂಚಾಯಿತಿ ಆಡಳಿತ ವೈಫಲ್ಯದ ಕೇಂದ್ರವಾಗಿ ಪರಿಣಮಿಸಿದ್ದು, ಸಿಬ್ಬಂದಿಗಳ ಅನಗತ್ಯ ವಜಾ ಹಾಗೂ ಕರ್ತವ್ಯದ ಅವಧಿಯಲ್ಲಿ ಸಿಬ್ಬಂದಿಗಳ ಗೈರುಹಾಜರಿಯಿಂದ ಗ್ರಾಮಸ್ಥರಲ್ಲಿ ತೀವ್ರ ಆಕ್ರೋಶ ಉಂಟಾಗಿದೆ. ಪಂಚಾಯಿತಿ ಆಡಳಿತದ ಇಂತಹ ಬೇಜವಾಬ್ದಾರಿತನವನ್ನು ಖಂಡಿಸಿ ಗ್ರಾಮದ ತಿಪ್ಪಣ್ಣ ಎಂಬುವವರು ನೇರವಾಗಿ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಡಿಸೆಂಬರ್ 16ರಂದು ಮಧ್ಯಾಹ್ನ 3.30 ಗಂಟೆಯಾದರೂ ಪಂಚಾಯಿತಿ ಕಚೇರಿಯಲ್ಲಿ ಬಹುತೇಕ ಕುರ್ಚಿಗಳು ಖಾಲಿ ಇರುವುದನ್ನು ಕಂಡು ಅಚ್ಚರಿಗೊಂಡ ತಿಪ್ಪಣ್ಣ, ಸಾರ್ವಜನಿಕರ ಕೆಲಸ ಮಾಡಿಕೊಡಬೇಕಾದ ಸಿಬ್ಬಂದಿಗಳು…

Read More

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ: ಅರ್ಜಿ ಆಹ್ವಾನ

​ಧಾರವಾಡ: ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯು ಜನವರಿ 1, 2026 ರಿಂದ ಪ್ರಾರಂಭವಾಗಲಿರುವ ಆರು ತಿಂಗಳ ಅವಧಿಯ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ (ಡಿ.ಸಿ.ಎಂ) ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ​ಈ ತರಬೇತಿಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಶಿಷ್ಯವೇತನವನ್ನು ಸಹ ನೀಡಲಾಗುವುದು. ಈ ಡಿಪ್ಲೊಮಾ ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದವರಿಗೆ ವಿವಿಧ ರೀತಿಯ ಸಹಕಾರ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಹೆಚ್ಚಿನ ಅವಕಾಶಗಳು ದೊರೆಯಲಿವೆ. ವಿಶೇಷವಾಗಿ ಅರ್ಬನ್…

Read More

ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿ ಮನೆಗೂ ಜಾಗೃತಿ ತಲುಪಲಿ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ: “ಭಾರತ ಸರ್ಕಾರವು ಮುಂದಿನ ಹತ್ತು ವರ್ಷಗಳಲ್ಲಿ ದೇಶವನ್ನು ಬಾಲ್ಯ ವಿವಾಹ ಮುಕ್ತವನ್ನಾಗಿಸುವ ಗುರಿ ಹೊಂದಿದ್ದು, ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಪ್ರತಿಯೊಂದು ಗ್ರಾಮವೂ ಮೊದಲು ಬಾಲ್ಯ ವಿವಾಹ ಮುಕ್ತವಾಗಬೇಕು. ಇದಕ್ಕಾಗಿ ಹಮ್ಮಿಕೊಂಡಿರುವ ನೂರು ದಿನಗಳ ಜಾಗೃತಿ ಅಭಿಯಾನ ಜಿಲ್ಲೆಯ ಪ್ರತಿ ಮನೆಗೂ ತಲುಪಬೇಕು” ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕರೆ ನೀಡಿದರು. ​ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ…

Read More

ಡಿಸೆಂಬರ್ 28 ರಂದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಎಸ್‌ಸಿ, ಎಸ್‌ಟಿ ಕುಂದುಕೊರತೆ ಸಭೆ

ಧಾರವಾಡ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆಗಳ ಸಭೆಯನ್ನು ಡಿಸೆಂಬರ್ 28 ರಂದು ಹಮ್ಮಿಕೊಳ್ಳಲಾಗಿದೆ. ​ಧಾರವಾಡ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಸಭೆ ಜರುಗಲಿದೆ. ಪೊಲೀಸ್ ಇಲಾಖೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಕುಂದುಕೊರತೆಗಳ ಬಗ್ಗೆ ಚರ್ಚಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಸಭೆಯನ್ನು ಆಯೋಜಿಸಲಾಗಿದೆ. ​ಜಿಲ್ಲೆಯಾದ್ಯಂತ ಇರುವ ಪರಿಶಿಷ್ಟ…

Read More

ಜಿಲ್ಲೆಯ ಆರ್ಥಿಕ ಪ್ರಗತಿಯಲ್ಲಿ ಬ್ಯಾಂಕುಗಳ ಪಾತ್ರ ಮಹತ್ವದ್ದು: ಸಿಇಓ ಭುವನೇಶ ಪಾಟೀಲ

ಧಾರವಾಡ: “ಜಿಲ್ಲೆಯ ಸಮಗ್ರ ಆರ್ಥಿಕ ಅಭಿವೃದ್ಧಿಯಲ್ಲಿ ಬ್ಯಾಂಕುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸರ್ಕಾರದ ಜನಹಿತ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತೆ ಬ್ಯಾಂಕ್ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು” ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಸೂಚಿಸಿದರು. ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಂಕರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ​ಕೃಷಿ, ಸಣ್ಣ ಉದ್ಯಮ, ಸ್ವ-ಉದ್ಯೋಗ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಿಗೆ ನೀಡಲಾಗುವ ಸಾಲ ಸೌಲಭ್ಯಗಳು ಕಾಲಮಿತಿಯಲ್ಲಿ ಲಭ್ಯವಾಗಬೇಕು…

Read More

ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಎಚ್. ಕೆ. ಪಾಟೀಲ

ಅಣ್ಣಿಗೇರಿ: “ಗ್ರಾಮಗಳು ನಮ್ಮ ದೇಶದ ಆತ್ಮಗಳಿದ್ದಂತೆ. ಗ್ರಾಮಗಳ ಅಭಿವೃದ್ಧಿಯಾಗದ ಹೊರತು ದೇಶದ ಅಭಿವೃದ್ಧಿ ಸಾಧ್ಯವಿಲ್ಲ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ ಹೇಳಿದರು. ​ತಾಲೂಕಿನ ನಲವಡಿ ಗ್ರಾಮದಲ್ಲಿ ಶನಿವಾರ ನೂತನವಾಗಿ ನಿರ್ಮಿಸಲಾದ ಗ್ರಾಮ ಪಂಚಾಯತಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ತಮಗಿರುವ ವಿಶೇಷ ಆಸಕ್ತಿಯನ್ನು ವ್ಯಕ್ತಪಡಿಸಿದ ಸಚಿವರು, “ಪಂಚಾಯತಿ ಎಂದರೆ ನನಗೆ ಪ್ರೀತಿ ಮತ್ತು ಪ್ರಾಣವಿದ್ದಂತೆ. ರಾಜ್ಯದಲ್ಲಿರುವ ಗ್ರಾಮ ಸ್ವರಾಜ್ ಪಂಚಾಯತ್ ರಾಜ್ ಕಾನೂನು ಯಶಸ್ವಿಯಾಗಿ…

Read More

ವ್ಯಾಪಾರವು ರಾಷ್ಟ್ರದ ಪ್ರಗತಿಯ ಜೀವನಾಡಿ: ಪ್ರೊ. ಎಂ. ಆರ್. ಸೊಲ್ಲಾಪೂರ ಅಭಿಪ್ರಾಯ

ಧಾರವಾಡ: ವ್ಯಾಪಾರವು ರಾಷ್ಟ್ರದ ಪ್ರಗತಿಯ ಜೀವನಾಡಿಯಾಗಿದ್ದು, ನಾಗರಿಕತೆಯ ಉದಯದೊಂದಿಗೆ ಇದು ಅವಿಭಾಜ್ಯವಾಗಿ ಬೆಳೆದು ಬಂದಿದೆ ಎಂದು ತುಮಕೂರು ತಾಂತ್ರಿಕ ಮಹಾವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ. ಎಂ. ಆರ್. ಸೊಲ್ಲಾಪೂರ ಅವರು ಹೇಳಿದರು. ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ‘ವಾಣಿಜ್ಯ ಮತ್ತು ಆಡಳಿತ ಮಂಟಪ’ದ ಪ್ರಸಕ್ತ ತ್ರೈವಾರ್ಷಿಕ ಅವಧಿಯ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ​ನಮ್ಮ ಇಡೀ ಬದುಕು ವಾಣಿಜ್ಯದೊಂದಿಗೆ ಬೆಸೆದುಕೊಂಡಿದೆ. ವಾಣಿಜ್ಯದ ಜೊತೆಗೆ ಸಮರ್ಥ ಆಡಳಿತವಿದ್ದಾಗ ಮಾತ್ರ ಅಭಿವೃದ್ಧಿಗೆ ಹೊಸ ಶಕ್ತಿ ಬರಲು ಸಾಧ್ಯ. ಕರ್ನಾಟಕ…

Read More

ಪಾಲಕರು ಮತ್ತು ಮಕ್ಕಳ ನಡುವೆ ಸಮನ್ವಯ ಅಗತ್ಯ: ಡಾ. ಗುರುರಾಜ ಪಾಟೀಲ ಕರೆ

ಧಾರವಾಡ: ಇಂದಿನ ವೇಗದ ಬದುಕಿನಲ್ಲಿ ಕುಟುಂಬ ವ್ಯವಸ್ಥೆಯು ಸುಭದ್ರವಾಗಿರಬೇಕಾದರೆ ಪಾಲಕರು ಮತ್ತು ಮಕ್ಕಳ ನಡುವೆ ಪರಸ್ಪರ ವಿಶ್ವಾಸ ಹಾಗೂ ಸಮನ್ವಯದ ಅಗತ್ಯವಿದೆ ಎಂದು ಹಿರಿಯ ಸುಭೋದ ಸಮಾಲೋಚಕರಾದ ಡಾ. ಗುರುರಾಜ ಪಾಟೀಲರು ಅಭಿಪ್ರಾಯಪಟ್ಟರು. ಕರ್ನಾಟಕ ವಿದ್ಯಾವರ್ಧಕ ಸಂಘದ ಮಹಿಳಾ ಮತ್ತು ಮಕ್ಕಳ ಮಂಟಪದ ವತಿಯಿಂದ ಆಯೋಜಿಸಲಾಗಿದ್ದ ‘ಕುಟುಂಬ ವ್ಯವಸ್ಥೆಯಲ್ಲಿ ಪಾಲಕರ ಮತ್ತು ಮಕ್ಕಳ ಆಕ್ಷೇಪಗಳು ಹಾಗೂ ಅಪೇಕ್ಷೆಗಳು’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕುಟುಂಬದಲ್ಲಿ ಪಾಲಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರದೆ…

Read More

ರಾಜ್ಯಾದ್ಯಂತ ಶೀತಗಾಳಿ ತೀವ್ರ: ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಂದ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ

ಧಾರವಾಡ: ರಾಜ್ಯಾದ್ಯಂತ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಶೀತಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗತ್ಯ ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳನ್ನು ಜಿಲ್ಲೆಯ ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚನೆ ನೀಡಿದ್ದಾರೆ. ​ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಸೂಚನೆ: ಶೀತಗಾಳಿಯಿಂದ ಉಂಟಾಗಬಹುದಾದ ಲಘಷ್ಣತೆ (ಹೈಪೋಥರ್ಮಿಯಾ), ಹೃದಯಾಘಾತ ಹಾಗೂ ಉಸಿರಾಟದ ಸಮಸ್ಯೆಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕೆಲವು ಪ್ರಮುಖ ಮುನ್ನೆಚ್ಚರಿಕೆಗಳನ್ನು ನೀಡಿದೆ: ​ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ: ಜಿಲ್ಲಾಧಿಕಾರಿಗಳು ಜಿಲ್ಲೆಯ ಅಧಿಕಾರಿಗಳಿಗೆ…

Read More