ಗುಡಗೇರಿ: ಇಸ್ಪೀಟ್ ಜೂಜಾಟದ ಮೇಲೆ ಪೊಲೀಸರ ದಾಳಿ; ಎಂಟು ಜನರ ಬಂಧನ
ಕುಂದಗೋಳ: ತಾಲ್ಲೂಕಿನ ಗುಡಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕಿಪುರ-ಗೌಡಗೇರಿ ರಸ್ತೆ ಪಕ್ಕದ ಹಳ್ಳದ ದಂಡೆಯ ಮೇಲೆ ಅಕ್ರಮವಾಗಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಡಿಸೆಂಬರ್ 14 ರಂದು ಬೆಳಿಗ್ಗೆ ಸುಮಾರು 10:15 ಗಂಟೆಯ ಸುಮಾರಿಗೆ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ‘ಅಂದರ್-ಬಾಹರ್’ ಎಂಬ ಜೂಜಾಟ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ದಾಳಿಯ ವೇಳೆ ಜೂಜಾಟದಲ್ಲಿ ತೊಡಗಿದ್ದ ಎಂಟು ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಿಂದ ಒಟ್ಟು…

