ಅಸಾಧಾರಣ ಸಾಧಕ ಮಕ್ಕಳಿಂದ ‘ಬಾಲಗೌರವ’ ಪ್ರಶಸ್ತಿಗೆ ಅರ್ಜಿ ಆಹ್ವಾನ
ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ವತಿಯಿಂದ 2024-25 ಮತ್ತು 2025-26ನೇ ಸಾಲಿನ ‘ಬಾಲಗೌರವ’ ಪ್ರಶಸ್ತಿಗಾಗಿ ಅರ್ಹ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಮಕ್ಕಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಯಾರು ಅರ್ಜಿ ಸಲ್ಲಿಸಬಹುದು? 18 ವರ್ಷದೊಳಗಿನ ಮಕ್ಕಳಾಗಿದ್ದು, ಕ್ರೀಡೆ, ಸಂಗೀತ, ನೃತ್ಯ, ನಟನೆ, ಚಿತ್ರಕಲೆ, ವಿಜ್ಞಾನ ಮತ್ತು ಸಂಶೋಧನೆ ಅಥವಾ ಬಹುಮುಖ ಪ್ರತಿಭೆ (All-rounder) ವಿಭಾಗಗಳಲ್ಲಿ…

