ಅಣ್ಣಿಗೇರಿಯಲ್ಲಿ ತಾಲೂಕು ಆಡಳಿತದಿಂದ ಸಡಗರದ ಗಣರಾಜ್ಯೋತ್ಸವ ಆಚರಣೆ
ಅಣ್ಣಿಗೇರಿ: ಪಟ್ಟಣದ ಶಾಸಕರ ಮಾದರಿ ಶಾಲೆಯ ಮೈದಾನದಲ್ಲಿ ಸೋಮವಾರ ಅಣ್ಣಿಗೇರಿ ತಾಲೂಕು ಆಡಳಿತದ ವತಿಯಿಂದ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅಣ್ಣಿಗೇರಿ ತಹಶೀಲ್ದಾರ್ ಮಂಜುನಾಥ ದಾಸಪ್ಪನವರ ಅವರು, ಗಣರಾಜ್ಯೋತ್ಸವವು ನಮ್ಮ ಸಂವಿಧಾನದ ಏಕತೆ ಮತ್ತು ಪ್ರಜಾಪ್ರಭುತ್ವದ ಶಕ್ತಿಯನ್ನು ಸ್ಮರಿಸುವ ಮಹತ್ವದ ದಿನವಾಗಿದೆ. ದೇಶದ ಉನ್ನತ ಮೌಲ್ಯಗಳನ್ನು ಕಾಪಾಡುವ ಸಂಕಲ್ಪದೊಂದಿಗೆ ನಾವೆಲ್ಲರೂ ಮುನ್ನಡೆಯೋಣ ಎಂದು ಕರೆ ನೀಡಿದರು. ನಂತರ ಪುರಸಭೆ ಅಧ್ಯಕ್ಷ ಶಿವಾನಂದ ಬೆಳಹಾರ ಮಾತನಾಡಿ, ಅಣ್ಣಿಗೇರಿ ನಗರವನ್ನು ಸ್ವಚ್ಛ ಮತ್ತು…

