ಧಾರವಾಡ ಜಿಲ್ಲೆಯ ಮೂರು ಗ್ರಾಮಗಳಲ್ಲಿ ‘ಗ್ರಾಮ-ಒನ್’ ಕೇಂದ್ರಕ್ಕೆ ಅರ್ಜಿ ಆಹ್ವಾನ: ಆಸಕ್ತರಿಗೆ ಸುವರ್ಣಾವಕಾಶ
ಧಾರವಾಡ: ಸಾರ್ವಜನಿಕರಿಗೆ ಸರ್ಕಾರದ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ತಲುಪಿಸುವ ಮಹತ್ವಾಕಾಂಕ್ಷೆಯ ‘ಗ್ರಾಮ-ಒನ್’ ಕೇಂದ್ರದ ಫ್ರಾಂಚೈಸಿಗಳನ್ನು ಸ್ಥಾಪಿಸಲು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯು ಅರ್ಜಿಗಳನ್ನು ಆಹ್ವಾನಿಸಿದೆ. ಜಿಲ್ಲೆಯ ಆಯ್ದ ಮೂರು ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಈ ಕೇಂದ್ರಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಡಕಿಹೊನ್ನಳ್ಳಿ ಮತ್ತು ದೇವಲಿಂಗಿಕೊಪ್ಪ ಗ್ರಾಮ ಪಂಚಾಯತಿಗಳಲ್ಲಿ ಹಾಗೂ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ಗ್ರಾಮ-ಒನ್ ಕೇಂದ್ರಗಳ…

