ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ: ರೈತರಿಗೆ ಸುಸ್ಥಿರ ಕೃಷಿಯತ್ತ ಹೆಜ್ಜೆ ಇಡಲು ಸುವರ್ಣಾವಕಾಶ

​ಧಾರವಾಡ, ಡಿ. 11: ಮಳೆಯಾಶ್ರಿತ ಕೃಷಿಯನ್ನು ಕೇವಲ ಜೀವನಾಧಾರಿತವಾಗಿಸದೆ, ಸುಸ್ಥಿರ ಕೃಷಿಯನ್ನಾಗಿ ಪರಿವರ್ತಿಸಿ ರೈತರ ಜೀವನಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಕೃಷಿ ಭಾಗ್ಯ ಮತ್ತು ಕೃಷಿ ಭಾಗ್ಯ ಎಸ್‍ಡಿಎಮ್‍ಎಫ್ ಯೋಜನೆಯ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ಸಾಲಿಗೆ ಧಾರವಾಡ ಜಿಲ್ಲೆಗೆ ಈ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿದ್ದು, ಪ್ಯಾಕೇಜ್ ಮಾದರಿಯಲ್ಲಿ ಇದು ಅನುಷ್ಠಾನಗೊಳ್ಳುತ್ತಿದೆ. ​ಕೃಷಿ ಭಾಗ್ಯ ಯೋಜನೆಯಡಿ ಒಟ್ಟು ಆರು ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಯೋಜನೆಯ ಸಮಗ್ರ ಪ್ರಯೋಜನ ಪಡೆಯಲು ರೈತರು ಎಲ್ಲಾ…

Read More

ಧಾರವಾಡ: ಗ್ರಾಮೀಣ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣ ಸೌಲಭ್ಯ: ಅರ್ಜಿ ಸಲ್ಲಿಕೆ ಅವಧಿ ಡಿ. 31 ರವರೆಗೆ ವಿಸ್ತರಣೆ

ಧಾರವಾಡ, ಡಿ. 11: ಜಿಲ್ಲೆಯ ಗ್ರಾಮೀಣ ಭಾಗದ ಕುಶಲಕರ್ಮಿಗಳ ಆರ್ಥಿಕ ಸಬಲೀಕರಣಕ್ಕಾಗಿ ಹಮ್ಮಿಕೊಳ್ಳಲಾಗಿರುವ ಸುಧಾರಿತ ಉಪಕರಣ ವಿತರಣಾ ಯೋಜನೆಗೆ ಅರ್ಜಿ ಸಲ್ಲಿಸುವ ಕಾಲಾವಧಿಯನ್ನು ಡಿಸೆಂಬರ್ 31, 2025 ರವರೆಗೆ ವಿಸ್ತರಿಸಲಾಗಿದೆ. ​2025-26 ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಅರ್ಹ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣಗಳನ್ನು ನೀಡಲು ಈ ಹಿಂದೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ನಿಗದಿಪಡಿಸಿದ ಕ್ರಿಯಾ ಯೋಜನೆಯ ಗುರಿಯನುಸಾರ ಕಮ್ಮಾರಿಕೆ, ಕ್ಷೌರಿಕ ಹಾಗೂ ಧೋಬಿ ವೃತ್ತಿಯ ಚಟುವಟಿಕೆಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಅರ್ಜಿಗಳು…

Read More

ಯಶಸ್ಸಿನ ಹಾದಿಯಲ್ಲಿ ಹುಬ್ಬಳ್ಳಿಯ ‘ಸ್ವಾವಲಂಬಿ ಸಖಿ’ ಒಕ್ಕೂಟ: 1 ಕೋಟಿ ರೂ. ವಹಿವಾಟಿನ ಗುರಿ

ಧಾರವಾಡ (ಡಿ. 11): ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಸ್ವಯಂ ಸಹಾಯ ಗುಂಪುಗಳ ಮಹಿಳೆಯರು ವೃತ್ತಿಪರ ದೃಷ್ಟಿಕೋನದೊಂದಿಗೆ ಆರ್ಥಿಕ ಸ್ವಾವಲಂಬನೆಯ ಹೊಸ ಇತಿಹಾಸ ಬರೆಯುತ್ತಿದ್ದಾರೆ. ಇಲ್ಲಿನ ಮಹಿಳಾ ಒಕ್ಕೂಟವಾಗಿರುವ ‘ಸ್ವಾವಲಂಬಿ ಸಖಿ ಪ್ರೊಡ್ಯೂಸರ್ ಕಂಪನಿ’ಯು ಸದ್ಯದಲ್ಲಿಯೇ 1 ಕೋಟಿ ರೂಪಾಯಿಗಳ ಬೃಹತ್ ವ್ಯಾಪಾರ ವಹಿವಾಟಿನ ಗುರಿಯತ್ತ ದಾಪುಗಾಲು ಹಾಕುತ್ತಿದೆ. ​ನಾಬಾರ್ಡ್ (NABARD) ಬೆಂಬಲದೊಂದಿಗೆ ಆರಂಭವಾದ ಈ ಒಕ್ಕೂಟವು ಸಂಘಟಿತ ಶಕ್ತಿಯ ಮೂಲಕ ಹೇಗೆ ಯಶಸ್ಸು ಕಾಣಬಹುದು ಎಂಬುದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ಹೊರಹೊಮ್ಮಿದೆ. ಪ್ರಸ್ತುತ ಈ ಕಂಪನಿಯಲ್ಲಿ 350ಕ್ಕೂ ಹೆಚ್ಚು…

Read More

ಧಾರವಾಡ ಶಾಂತಿಯುತ ಧರಣಿಗೆ ಮುಂದಾದ ಉದ್ಯೋಗಾಕಾಂಕ್ಷಿಗಳ ಬಂಧನ: ಎಐಯುಟಿಯುಸಿ ತೀವ್ರ ಖಂಡನೆ

ಧಾರವಾಡ,: ತಮ್ಮ ನ್ಯಾಯಯುತ ಹಕ್ಕೊತ್ತಾಯಗಳಿಗಾಗಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸಂಘಟಿಸಿದ್ದ ಶಾಂತಿಯುತ ಧರಣಿಯನ್ನು ಪೊಲೀಸರ ಬಲದಿಂದ ಹತ್ತಿಕ್ಕಿದ ರಾಜ್ಯ ಸರ್ಕಾರದ ಕ್ರಮವನ್ನು ಎಐಯುಟಿಯುಸಿ (AIUTUC) ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ. ಬಂಧಿಸಲಾದ ಎಲ್ಲ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡಬೇಕು ಎಂದು ಎಐಯುಟಿಯುಸಿ ಜಿಲ್ಲಾ ಸಮಿತಿ ಒತ್ತಾಯಿಸಿದೆ. ​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ ಅವರು, ಉದ್ಯೋಗಾಂಕ್ಷಿಗಳ ಬೇಡಿಕೆಗಳು ನ್ಯಾಯಯುತವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಇಲಾಖೆಗಳಲ್ಲಿ ಖಾಲಿ ಇರುವ…

Read More

“ಪರೀಕ್ಷೆಗಳು ಅಂದು-ಇಂದು” ಕುರಿತು ಉಪನ್ಯಾಸ ಮತ್ತು ಸಂವಾದ: ಡಿ. 11 ರಂದು ಕಾರ್ಯಕ್ರಮ

​ಧಾರವಾಡ, ಡಿ 10,: ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು, ಧಾರವಾಡದ ಛತ್ರಪತಿ ಶಿವಾಜಿ ಮಹಾರಾಜ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ “ಪರೀಕ್ಷೆಗಳು ಅಂದು-ಇಂದು” ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ. ​ಈ ಕಾರ್ಯಕ್ರಮವು ಡಿಸೆಬಂರ್ 11, ರಂದು ಬೆಳಿಗ್ಗೆ 11:15 ಗಂಟೆಗೆ ಶ್ರೀ ಶಿವಾಜಿ ಮಹಾರಾಜ ಪದವಿಪೂರ್ವ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ​ಧಾರವಾಡ ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಎನ್. ಮೋರೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಧಾರವಾಡ…

Read More

ವಿಶ್ವ ಮಾನವ ಹಕ್ಕುಗಳ ದಿನಾಚರಣೆ: “ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆ” ಡಿ ಸಿ ದಿವ್ಯಪ್ರಭು

ಧಾರವಾಡ, ಡಿ. 10: ಪ್ರತಿಯೊಬ್ಬ ವ್ಯಕ್ತಿಯ ಘನತೆಯ ಬದುಕಿನ ಹಕ್ಕನ್ನು ಗೌರವಿಸಿ, ಸರ್ವರನ್ನೂ ಸಮಾನವಾಗಿ ಕಾಣುವ ಸಮಾಜ ನಿರ್ಮಾಣ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಅವರು ತಿಳಿಸಿದರು. ​ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾ ಭವನದಲ್ಲಿ ಬುಧವಾರದಂದು (ಡಿ.10) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ…

Read More

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಎಸ್ಸಿ/ಎಸ್ಟಿ ಪದವೀಧರರಿಗೆ ಅವಕಾಶ

ಧಾರವಾಡ, ಡಿ. 10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26 ನೇ ಸಾಲಿಗೆ ಎಸ್.ಸಿ.ಎಸ್.ಪಿ (SCSP) ಮತ್ತು ಟಿ.ಎಸ್.ಪಿ (TSP) ಯೋಜನೆಯಡಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ​ಧಾರವಾಡದ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯ ವತಿಯಿಂದ ಪರಿಶಿಷ್ಟ ಜಾತಿಯ ಒರ್ವ (01) ಮತ್ತು ಪರಿಶಿಷ್ಟ ಪಂಗಡದ ಒರ್ವ (01) ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕಚೇರಿಯಲ್ಲಿ 12 ತಿಂಗಳ ಅವಧಿಯ ತರಬೇತಿ ನೀಡಲಾಗುತ್ತದೆ. ​ಅರ್ಹತೆ ಮತ್ತು…

Read More

ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಡಿ. 13 ರಿಂದ ಫಲಪುಷ್ಪ ಪ್ರದರ್ಶನ ಮತ್ತು ಸರಸ ಮೇಳ ಆಯೋಜನೆ

ಧಾರವಾಡ, ಡಿ. 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ಫಲಪುಷ್ಪ ಪ್ರದರ್ಶನ ಮತ್ತು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮತ್ತು ಉದ್ಯಮ ಇಲಾಖೆಯ ಸರಸ ಮೇಳವನ್ನು ಡಿಸೆಂಬರ್ 13 ರಿಂದ ಡಿಸೆಂಬರ್ 15, 2025 ರವರೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಭುವನೇಶ ಪಾಟೀಲ ಅವರು ತಿಳಿಸಿದರು. ​ಬುಧವಾರದಂದು (ಡಿ.10) ಜಿಲ್ಲಾ ಪಂಚಾಯತ್ ಕಾನ್ಫರೆನ್ಸ್ ಹಾಲ್‍ನಲ್ಲಿ ಪತ್ರಿಕಾಗೋಷ್ಠಿ…

Read More

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಧಾರವಾಡ, ಡಿ. 09: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2025-26 ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮಹತ್ವದ ಯೋಜನೆಗಳ ಪ್ರಯೋಜನ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ​ಧನಶ್ರೀ, ಚೇತನಾ, ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳ ಅಡಿಯಲ್ಲಿ ಸಹಾಯಧನ ಅಥವಾ ಸಾಲ ಸೌಲಭ್ಯ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬಹುದು. ​ಅರ್ಜಿದಾರರು ಸೇವಾ ಸಿಂಧೂ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹತ್ತಿರದ ಬಾಪೂಜಿ…

Read More

ಜಿಲ್ಲಾ ಮಟ್ಟದ ‘ಕಲಾ ಪ್ರತಿಭೋತ್ಸವ’ಕ್ಕೆ ಸಕಲ ಸಿದ್ಧತೆ: ಡಿ. 11 ಮತ್ತು 12 ರಂದು ಕಾರ್ಯಕ್ರಮ

ಧಾರವಾಡ, ಡಿ. 09: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಡಿಸೆಂಬರ್ 11 ಮತ್ತು 12, 2025 ರಂದು ಜಿಲ್ಲಾ ಮಟ್ಟದ ‘ಕಲಾ ಪ್ರತಿಭೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಈ ಪ್ರತಿಭೋತ್ಸವ ಜರುಗಲಿದ್ದು, ಇದರಲ್ಲಿ ವಿವಿಧ ಕಲಾಪ್ರಕಾರಗಳ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಮತ್ತು ಯುವ ಪ್ರತಿಭೆಗಳು ಭಾಗವಹಿಸಲಿದ್ದಾರೆ. ​ಉದ್ಘಾಟನಾ ಸಮಾರಂಭಕ್ಕೆ ಗಣ್ಯರ ಆಗಮನ ​ಡಿ. 11 ರಂದು ಬೆಳಿಗ್ಗೆ 10 ಗಂಟೆಗೆ ಕಲಾ…

Read More