ಪದಕ ವಿಜೇತ ಪರಿಶಿಷ್ಟ ಜಾತಿ/ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ
ಧಾರವಾಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ೨೦೨೫-೨೬ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ, ಅಧಿಕೃತ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ೨೦೨೪ನೇ ಕ್ಯಾಲೆಂಡರ್ ವರ್ಷದಲ್ಲಿ (ದಿನಾಂಕ: ೦೧-೦೧-೨೦೨೪ ರಿಂದ ೩೧-೧೨-೨೦೨೪ ರವರೆಗೆ) ನಡೆದ ಅಧಿಕೃತ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಆಸಕ್ತ ಮತ್ತು…

